ಮೂಡಿಗೆರೆ: ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಬಿಸಾಕುವುದು ಖಂಡನಿಯ. ಇಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತಾರೇಶ್ ಜೇನುಬೈಲು ಒತ್ತಾಯಿಸಿದರು

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಮೂಡಿಗೆರೆ ಹಾಸನ ಮಾರ್ಗದ ರಸ್ತೆಯಲ್ಲಿ ಜೇನುಬೈಲು ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಕಸ ಬಿಸಾಕುತ್ತಿದ್ದು ಅಲ್ಲದೆ ಚಿಕನ್ ಮಟನ್ ತ್ಯಾಜ್ಯವನ್ನು ಇಲ್ಲಿ ಸುರಿಯುತ್ತಿದ್ದಾರೆ ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹೆಚ್ಚಿದೆ ಎಂದರು.
ಹಾಗೆ ರಸ್ತೆ ಬದಿ ತ್ಯಾಜ್ಯ ಎಸೆಯುವುದು ಕಂಡು ಬಂದರೆ ಕಠಿಣ ಕ್ರಮ ಜರುಗಿಸಬೇಕು. ಅರಣ್ಯ ಪ್ರದೇಶದಲ್ಲಿ ವಿವಿಧ ಚಿಕನ್ ಮಟನ್ ಅಂಗಡಿ ಮಾಲೀಕರು ಹೋಂ ಸ್ಟೇ ಮಾಲೀಕರು ತ್ಯಾಜ್ಯವನ್ನು ತಂದು ಹಾಕುತ್ತಿದ್ದು
ಪರಿಸರ ಮತ್ತು ಸಾರ್ವಜನಿಕರಿಗೂ ತೊಂದರೆಯಾಗುತ್ತಿದೆ ಹಾಗಾಗಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿ ಅನ್ವಯ, ತ್ಯಾಜ್ಯ ವಿಲೇವಾರಿಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಅಂದ ಹಾಗೆ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ವಿಲೇವಾರಿಗೆ ಗುರುತಿಸಿದ ಸ್ಥಳಗಳಲ್ಲಿ ಮಾತ್ರ ತ್ಯಾಜ್ಯ ಹಾಕುವಂತೆ ಮನವಿ ಮಾಡಿದರು ಆದರೂ ಕಸ ಬಿಸಾಕುವರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತಿಲ್ಲ ಕೂಡಲೇ ಎಚ್ಚೆತ್ತುಕೊಂಡು ಇದಕ್ಕೊಂದು ಪರಿಹಾರ ಸೂಚಿಸಲೇಬೇಕು ಎಂದು ಎಚ್ಚರಿಕೆ ನೀಡಿದರು.
