ಚಿಕ್ಕಮಗಳೂರು: ನಗರದ ಹೃದಯಭಾಗವಾಗಿರುವ ಆಜಾದ್ ಪಾರ್ಕ್ ನಲ್ಲಿ ಸೆಪ್ಟಂಬರ್ 24ರಂದು ಸಂಜೆ 5.30ಕ್ಕೆ ಕರ್ನಾಟಕ ರತ್ನ, ಪವರ್ ಸ್ಟಾರ್ ಡಾ. ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ ಸಮಾರಂಭ ನಡೆಯಲಿದೆ
ಈ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಆಗಮಿಸಿ ಪುತ್ಥಳಿ ಅನಾವರಗೊಳಿಸಲಿದ್ದಾರೆ ಎಂದು ಅಭಿಮಾನಿ ಹಾಗೂ ಸ್ಟಾರ್ ವೆಲ್ನೆಸ್ ಪ್ರೈವೇಟ್ ಲಿಮಿಟೆಡ್ ಮುಖ್ಯಸ್ಥ ಡಾ. ಅಫ್ಸನಿ ಹಿಂದುಸ್ಥಾನಿ ತಿಳಿಸಿದರು.
ಈ ವೇಳೆ ಡಾ. ರಾಜ್ ಕುಮಾರ್ ಸಂಘದ ಅಧ್ಯಕ್ಷ ಓಂಕಾರೇಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಎಚ್ ಡಿ. ತಮ್ಮಯ್ಯ ಅವರು ಕನ್ನಡ ಧ್ವಜಾ ರೋಹಣ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ. ಎಲ್ ಶಂಕರ್ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಪುನೀತ್ ರಾಜ್ ಕುಮಾರ್ ಅವರ ನುಡಿ ನಮನ ಸಲ್ಲಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಬೋಜೇಗೌಡ ಅವರು ಡಾ. ರಾಜ್ ಕುಮಾರ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ವಿಧಾನಪರಿಷತ್ ಉಪಾಸಭಾಪತಿ ಎಂ.ಕೆ.ಪ್ರಾಣೇಶ್, ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ 2002 ರಲ್ಲಿ ಸ್ಥಾಪನೆಗೊಂಡ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆ ಸತತವಾಗಿ ಮೂರು ವರ್ಷಗಳ ಕಾಲ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಕಾರಣಕ್ಕಾಗಿ ಶಿಕ್ಷಣ ಇಲಾಖೆ ಸೆ. ೮ ರಂದು ನಡೆದ ಸಮಾರಂಭದಲ್ಲಿ ಅಭಿನಂದನಾ ಪತ್ರ ನೀಡಿ ಪ್ರಶಂಸಿದೆ ಎಂದು ಹೇಳಿದರು.
ತಮ್ಮ ಮಾಲೀಕತ್ವದ ವಿಸ್ಟಾರ್ ವೆಲ್ನೆಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2015 ರಲ್ಲಿ ಸ್ಥಾಪನೆ ಮಾಡಲಾಗಿದ್ದು, ವ್ಯಾಪಾರ ವಲಯದಲ್ಲಿ ಉತ್ತಮ ಸಾಧನೆ ಮಾಡಿದೆ. ಈ ಕಾರಣಕ್ಕಾಗಿ ಏಷ್ಯಾಟುಡೇ ಸಂಸ್ಥೆ ಸೆ. 25 ರಂದು ಲಂಡನ್‌ನ ಹೌಸ್ ಆಫ್ ಲಾರ್ಡ್ಸ್ ನಲ್ಲಿ ನಡೆಯಲಿರುವ ಗ್ಲೋಬಲ್ ಲೀಡರ್ಸ್ ಶೃಂಗ-2005 ರ ಸಮಾರಂಭದಲ್ಲಿ ವೆಲ್ಸೆಸ್ ಉತ್ಪನ್ನಗಳ ಪ್ರಮುಖ ತಯಾರಕರು ಪ್ರಶಸ್ತಿ ನೀಡಿ ಗೌರವಿಸಲಿದೆ ಎಂದರು.
ಸುದ್ಧಿಗೋಷ್ಠಿಯಲ್ಲಿ ವಿದ್ಯಾಭಾರತಿ ಆಂಗ್ಲ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸಾಹಿರಾ ಫಾತಿಮಾ, ವಿಸ್ಟಾರ್ ವೆಲ್ನೆಸ್ ಪ್ರೈ.ಲೀ.ನ ಪ್ರಧಾನ ವ್ಯವಸ್ಥಾಪಕ ಎಂ.ಆರ್. ಸೋಮಶೇಖರ್, ಹಣಕಾಸು ವಿಭಾಗದ ಮುಖ್ಯಸ್ಥ ಸಿ.ಆರ್. ಮಂಜುನಾಥ್ ಉಪಸ್ಥಿತರಿದ್ದರು.
