Tuesday, August 11, 2026
Homeಜಿಲ್ಲಾಸುದ್ದಿಮೂಡಿಗೆರೆ: ದೇವರಮನೆ ಅಭಿವೃದ್ದಿಗೆ ಸಂಪೂರ್ಣ ಸಹಕಾರ: ನಯನಾ ಮೋಟಮ್ಮ

ಮೂಡಿಗೆರೆ: ದೇವರಮನೆ ಅಭಿವೃದ್ದಿಗೆ ಸಂಪೂರ್ಣ ಸಹಕಾರ: ನಯನಾ ಮೋಟಮ್ಮ

Telegram Group
Join Now

ಮೂಡಿಗೆರೆ: ತಾಲೂಕಿನ ಹೆಸರಾಂತ ಪ್ರವಾಸಿ ತಾಣ ದೇವರಮನೆಗೆ ಶಾಸಕಿ ನಯನಾ ಮೋಟಮ್ಮ ಖುದ್ದು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಗೆ ದೇವಾಲಯದ ಅಭಿವೃದ್ಧಿ ಬಗ್ಗೆ ಜಿಲ್ಲಾ ಪಂಚಾಯತ್ ಸಿಇಓ ಕೀರ್ತನಾ ಅವರು ಶಾಕರಿಗೆ ಮಾಹಿತಿ ನೀಡಿದರು.

ಆ ನಂತರ ಶಾಸಕಿ ನಯನ ಮೋಟಮ್ಮ ಮಾತನಾಡಿ, ವಾಹನ ನಿಲುಗಡೆಗೆ ವಿಶೇಷ ಪಾರ್ಕಿಂಗ್ ವ್ಯವಸ್ಥೆ, ಕೆಲವು ಭಾಗಗಳಲ್ಲಿ ಸೂಚನಾ ಫಲಕ, ತಡೆಗೋಡೆಗಳ ಅವಶ್ಯಕತೆ ಇರುವುದು ಕಂಡು ಬಂದಿದ್ದು ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಹಣ ಜೋಡಿಸಿ ಕೊಡುವುದರ ಜೊತೆಗೆ ಇಲ್ಲಿನ ಅನೇಕ ಸಮಸ್ಯೆಗಳಿಗೆಶಾಶ್ವತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಣಕಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರೇಣುಕಾ, ತ್ರಿಪುರ ಗ್ರಾಮ ಪಂಚಾಯಿತಿ ಸದಸ್ಯ ಸುಬ್ರಮಣ್ಯ, ದೇವಸ್ಥಾನ ಸಮಿತಿ ಸದಸ್ಯ ಚೆನ್ನಕೇಶವ ಸೇರಿದಂತೆ ಹಲವು ಗ್ರಾಮಸ್ಥರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments