Saturday, August 8, 2026
Homeಜಿಲ್ಲಾಸುದ್ದಿಮೂಡಿಗೆರೆ :ರಕ್ತದಾನದಿಂದ ಮತ್ತೊಂದು ಜೀವ ಉಳಿಸಲು ಸಾಧ್ಯ : ಮಧು ದಾರದಹಳ್ಳಿ

ಮೂಡಿಗೆರೆ :ರಕ್ತದಾನದಿಂದ ಮತ್ತೊಂದು ಜೀವ ಉಳಿಸಲು ಸಾಧ್ಯ : ಮಧು ದಾರದಹಳ್ಳಿ

Telegram Group
Join Now

ಮೂಡಿಗೆರೆ: ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಿಜೆಪಿ ಯುವ ಮೋರ್ಚಾ ಕಸಬಾ ಹೋಬಳಿ ಅಧ್ಯಕ್ಷ ಮಧು ದಾರದಹಳ್ಳಿ ಮಾತನಾಡಿ ಸರ್ವ ದಾನಗಳಿಗೂ ಮಿಗಿಲಾದದ್ದು ರಕ್ತದಾನ ವಾಗಿದೆ. ರಕ್ತದ ಕೊರತೆಯಿಂದಾಗಿ ಅನೇಕರು ಸಾವನಪ್ಪಿದ್ದು, ಜೀವ ಉಳಿಸಲು ಯುವಕರು ಹೆಚ್ಚಾಗಿ ರಕ್ತದಾನ ಮಾಡುವಂತೆ ಮನವಿ ಮಾಡಿದರು.

ನಾವು ಕೊನೆಯುಸಿರೆಳೆದರೆ ಏನನ್ನು ತೆಗೆದುಕೊಂಡು ಹೋಗುವುದಿಲ್ಲ ಜೀವಂತ ಇದ್ದಾಗಲೇ ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳೋಣ ಎಂದು ಸಲಹೆ ನೀಡಿದರು.

ಇದೇ ವೇಳೆ ನೂರಾರು ಬಿಜೆಪಿ ಕಾರ್ಯರ್ತರು ರಕ್ತದಾನದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿ ಗೊಳಿಸಿದರು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments