Saturday, August 8, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಬೀದಿನಾಯಿಗಳ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ: ಶೀಲಾದಿನೇಶ್

ಚಿಕ್ಕಮಗಳೂರು: ಬೀದಿನಾಯಿಗಳ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ: ಶೀಲಾದಿನೇಶ್

Telegram Group
Join Now

ಚಿಕ್ಕಮಗಳೂರು: ನಗರದಲ್ಲಿ ಬೀದಿನಾಯಿಗಳ ಉಪಟಳದಿಂದಾಗಿ ಹಲವಾರು ಮಕ್ಕಳು, ನಾಗರಿಕರನ್ನು ಕಚ್ಚಿ ಗಾಯಗೊಳಿಸಿರುವುದನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭಾಧ್ಯಕ್ಷೆ ಶೀಲಾದಿನೇಶ್ ತಿಳಿಸಿದರು.

ಅವರು ನಗರಸಭೆ ಆವರಣದಲ್ಲಿ ಆಯೋಜಿಸಲಾಗಿದ್ದ ಪಶುಪಾಲನಾ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಬೀದಿನಾಯಗಳ ನಿಯಂತ್ರಣ ಕುರಿತ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೀದಿನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅಗತ್ಯ ನಿಯಂತ್ರಣಕ್ಕೆ ಬೇಕಾದ ಮುಂಜಾಗ್ರತಾ ಕ್ರಮ ಕೈಗೊಳ್ಳುವುದರ ಬಗ್ಗೆ ಈ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ನಗರಸಭೆ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ ಬೀದಿನಾಯಿಗಳ ಉಪಟಳದಿಂದಾಗಿ ಮಕ್ಕಳು ಮತ್ತು ನಾಗರಿಕರಿಗೆ ಬಹಳ ತೊಂದರೆಯಾಗುತ್ತಿದೆ ಎಂದು ಬಂದ ದೂರುಗಳ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದರ ಬಗ್ಗೆ ಸೂಕ್ತ ನಿರ್ಧಾರಕ್ಕೆ ಬರಲಾಗಿದೆ ಎಂದರು.

ಬೆಂಗಳೂರಿನ ಡಬ್ಲೂಬಿಎನ್‌ಎಸ್ ಸಂಸ್ಥೆ ಈಗ ಮುಂದೆ ಬಂದಿದ್ದು, ಪಶುಪಾಲನಾ ಇಲಾಖೆಯ ಸಹಯೋಗದಲ್ಲಿ ಆರೋಗ್ಯಪೂರ್ಣ ಚರ್ಚೆ ನಡೆದಿದೆ. ನಾಯಿಗಳನ್ನು ಹಿಡಿಯುವ ಬಗ್ಗೆ ನಗರಸಭೆ ಪೌರ ಕಾರ್ಮಿಕರಿಗೆ ತರಬೇತಿ ನೀಡಿದರೆ ಈ ಸಮಸ್ಯೆಯನ್ನು ಸಂಪೂರ್ಣ ಹತೋಟಿಗೆ ತಂದು ನಿಯಂತ್ರಿಸಬಹುದಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಗಮನ ಸೆಳೆಯಲಾಗಿದ್ದು, ಇದು ಒಳ್ಳೆಯ ಸಲಹೆ ಎಂದು ಹೇಳಿದ್ದಾರೆ ಎಂದರು.

ನಗರದಲ್ಲಿ ಎಬಿಸಿ ಕೇಂದ್ರಗಳನ್ನು ಸ್ಥಳೀಯ ಸಂಸ್ಥೆಗಳೇ ನಿರ್ಮಾಣ ಮಾಡುವ ನಿಟ್ಟಿನಲ್ಲಿ ವೈದ್ಯರ ನೇಮಕ ಮಾಡಿ ಕ್ರಮ ವಹಿಸುವುದಾಗಿ ಸಭೆಗೆ ಭರವಸೆ ನೀಡಿದರು.

ಬೀದಿನಾಯಿಗಳಿಗೆ ನಾಗರೀಕರು ಎಲ್ಲೆಂದರಲ್ಲಿ ಆಹಾರ ಹಾಕುತ್ತಿದ್ದಾರೆ. ಇದರಿಂದಾಗಿ ನಾಯಿಗಳು ಮಕ್ಕಳು, ಮಹಿಳೆಯರನ್ನು ಕಚ್ಚಿ ಗಾಯಗೊಳಿಸುತ್ತಿವೆ. ಮುಂದೆ ನಗರಸಭೆ ಆರೋಗ್ಯ ನಿರೀಕ್ಷಕರು ಗುರ್ತಿಸುವ ಸ್ಥಳದಲ್ಲಿ ಆಹಾರ ಹಾಕಬೇಕೆಂದು ಮನವಿ ಮಾಡಿದರು.
ಸಧ್ಯದಲ್ಲೇ ನಗರದಲ್ಲಿ ನಗರಸಭೆ ಸದಸ್ಯರನ್ನೊಳಗೊಂಡ ಸಭೆ ನಡೆಸಿ ಔಪಚಾರಿಕ ಚರ್ಚೆ ನಡೆಸಿ ಬೀದಿನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ನಿರ್ಧಾರ ಕೈಗೊಳ್ಳಲಾಗುವುದೆಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments