ಶೃಂಗೇರಿ: ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ ನಡೆದಿದೆ.
ಸಂಕ್ಲಾಪುರ ನಿವಾಸಿ ಫಲಹ (26) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಸೌಂಡ್ಸ್ ಕೆಲಸ ಮಾಡಿಕೊಂಡಿದ್ದ ಫಲಹ ಸಾಲ ಮಾಡಿಕೊಂಡಿದ್ದು ಇದರಿಂದ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.
ಪ್ರಕರಣ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
