Sunday, August 9, 2026
Homeಬ್ರೇಕಿಂಗ್ ನ್ಯೂಸ್BREAKING: ಪದ್ಮಭೂಷಣ, ಸರಸ್ವತಿ ಪುತ್ರ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

BREAKING: ಪದ್ಮಭೂಷಣ, ಸರಸ್ವತಿ ಪುತ್ರ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

Telegram Group
Join Now

ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ. 

ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು,

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ಜುಲೈ 20, 1931 ಜನಿಸಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು.

ಪ್ರೌಢ ಶಿಕ್ಷಣ ಹಾಗೂ ಕಾಲೇಜು ಓದು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ “ಸತ್ಯ ಮತ್ತು ಸೌಂದರ್ಯ” ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ಆಯಾ ಕಾಲದಲ್ಲಿ ಬಂದ ಅವರ ಕಾದಂಬರಿಗಳೆಲ್ಲಾ ಚರ್ಚೆಗೆ ಒಳಗಾಗಿವೆ. ಇಂಗ್ಲಿಷ್ ಭಾಷೆಯೂ ಸೇರಿದಂತೆ ಭಾರತೀಯ ಹಲವು ಭಾಷೆಗಳಿಗೆ ಭೈರಪ್ಪನವರ ಕಾದಂಬರಿಗಳು ಅನುವಾದಗೊಂಡಿವೆ. ಗೃಹಭಂಗ, ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು ಹಿಂದಿ, ಮರಾಠಿಯಲ್ಲಿ ಜನಪ್ರಿಯವಾಗಿವೆ.

ಭೈರಪ್ಪ ಅವರ ಕಾದಂಬರಿಗಳು

ಭೀಮಕಾಯ(1952), ಬೆಳಕು ಮೂಡಿತು(1959), ಧರ್ಮಶ್ರೀ – (1961), ದೂರ ಸರಿದರು(1967), ಮತದಾನ (1965), ವಂಶವೃಕ್ಷ(1965), ಜಲಪಾತ (1967), ನಾಯಿ ನೆರಳು (1968), ತಬ್ಬಲಿಯು ನೀನಾದೆ ಮಗನೆ(1968), ಗೃಹಭಂಗ(1970), ನಿರಾಕರಣ-(1971), ಗ್ರಹಣ-(1972), ದಾಟು (1973), ಅನ್ವೇಷಣ(1976), ಪರ್ವ(1979), ನೆಲೆ (1983), ಸಾಕ್ಷಿ (1986) ಅಂಚು-(1990), ತಂತು (1993), ಸಾರ್ಥ(1998), ಮಂದ್ರ(2001), ಆವರಣ(2007), ಕವಲು (2010), ಯಾನ (2014) ಉತ್ತರಕಾಂಡ-(2017).

ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಎಂಬುದು ಎಸ್‌.ಎಲ್. ಬೈರಪ್ಪ ಅವರ ಪೂರ್ಣ ಹೆಸರು. ಭೈರಪ್ಪ ಅವರು ಕಾದಂಬರಿಗಳಲ್ಲದೆ ಸೌಂದರ್ಯಮೀಮಾಂಸೆ, ತತ್ವಶಾಸ್ತ್ರದ ಕುರಿತು ಅನೇಕ ಗ್ರಂಥಗಳನ್ನು ರಚಿಸಿದ್ದಾರೆ. ಪ್ರಮುಖ ಕೃತಿಗಳೆಂದರೇ, ವಂಶವೃಕ್ಷ, ದಾಟು, ತಂತು, ಅಂಚು, ಪರ್ವ, ಗೃಹಭಂಗ, ಅನ್ವೇಷಣ, ಮಂದ್ರ, ಸಾರ್ಥ, ನಾಯಿನೆರಳು, ಧರ್ಮಶ್ರೀ, ದೂರಸರಿದರು, ಮತದಾನ ಮುಂತಾದವು ಅವರ ಕಾದಂಬರಿಗಳಾಗಿವೆ. ಬೈರಪ್ಪ ಅವರಿಗೆ ಬಂದ ಪದವಿಗಳು ಮತ್ತು ಪ್ರಶಸ್ತಿಗಳು ಅಂದರೇ, ಭೈರಪ್ಪ ಅವರಿಗೆ 2010ರಲ್ಲಿ ಸರಸ್ವತಿ ಸಮ್ಮಾನ್, 2015ರಲ್ಲಿ ಸಾಹಿತ್ಯ ಅಕಾಡೆಮಿ ಫೆಲೋಶಿಪ್, 2016ರಲ್ಲಿ ಪದ್ಮಶ್ರೀ, ಮತ್ತು 2023ರಲ್ಲಿ ಪದ್ಮಭೂಷಣ ಪ್ರಶಸ್ತಿಗಳು ಲಭಿಸಿವೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments