ಚಿಕ್ಕಮಗಳೂರು: ಕೊಪ್ಪ ಪಟ್ಟಣ ಪಂಚಾಯಿತಿ ವಿರುದ್ಧ ಸಾರ್ವಜನಿಕರ ಪರವಾಗಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
ಚಿಕ್ಕಮಗಳೂರಿನಲ್ಲಿ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಕೊಪ್ಪ ಪಟ್ಟಣ ಪಂಚಾಯಿತಿ ಕಾರ್ಯ ವೈಖರಿಯಿಂದ ಬೇಸತ್ತ ಜನರು ಲೋಕಾಯುಕ್ತ ಮೊರೆ ಹೋಗಿದ್ದರು
ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ದಾಖಲೆಯನ್ನ ಗಮನಿಸಿ ನೆಗ್ಲಿಜನ್ಸಿ ಆಫ್ ಡ್ಯೂಟಿ ಆಧಾರದಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.
ಸಾರ್ವಜನಿಕರಿಗೆ ನ್ಯಾಯ ಒದಗಿಸಲು ನ್ಯಾಯಮೂರ್ತಿಗಳ ಭರವಸೆಯನ್ನು ನೀಡಿದ್ದು, ಕೇಸ್ ಅನ್ನು ಬಲಪಡಿಸಲು ಇನ್ನಷ್ಟು ದಾಖಲೆ ಸಂಗ್ರಹಿಸಲು ದೂರುದಾರರು ಮುಂದಾಗಿದ್ದಾರೆ.
