Tuesday, August 11, 2026
Homeಕ್ರೈಮ್ಅಜ್ಜಂಪುರ: ಸಾಲಬಾಧೆ: ವಿಷ ಸೇವಿಸಿ ರೈತ ಆತ್ಮಹತ್ಯೆ!

ಅಜ್ಜಂಪುರ: ಸಾಲಬಾಧೆ: ವಿಷ ಸೇವಿಸಿ ರೈತ ಆತ್ಮಹತ್ಯೆ!

Telegram Group
Join Now

ಚಿಕ್ಕಮಗಳೂರು: ಸಾಲಭಾದೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

ಹೌದು .. ಹೊಸಳ್ಳಿ ತಾಂಡ್ಯದ ಹನುಮಂತ ನಾಯ್ಕ್‌ (41) ಆತ್ಮಹತ್ಯೆ ಮಾಡಿಕೊಂಡಿದ್ದ ರೈತನಾಗಿರುತ್ತಾನೆ.

ಹನುಮಂತ ಬ್ಯಾಂಕಿನಲ್ಲಿ 7 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಮರುಪಾವತಿ ವಿಳಂಬವಾದ ಹಿನ್ನೆಲೆಯಲ್ಲಿ ಬ್ಯಾಂಕ್‌ ಅಧಿಕಾರಿಗಳು ಮನೆ ಬಾಗಿಲಿಗೆ ಬಂದು ಜಮೀನನ್ನು ಹರಾಜು ಹಾಕುತ್ತೇವೆ ಎಂದಿದ್ದರು . ಇದರಿಂದ ಮನನೊಂದು ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.

ಪ್ರಕರಣ ಸಂಬಂಧ ಅಜ್ಜಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ. ಬ್ಯಾಂಕ್‌ ಅಧಿಕಾರಿಗಳ ಒತ್ತಡಕ್ಕೆ ರೈತನ ಪ್ರಾಣ ಕಳೆದುಕೊಂಡಿದ್ದರ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments