Monday, August 10, 2026
Homeಬ್ರೇಕಿಂಗ್ ನ್ಯೂಸ್ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ: HD ದೇವೇಗೌಡ ಸ್ಪಷ್ಟನೆ!

ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ: HD ದೇವೇಗೌಡ ಸ್ಪಷ್ಟನೆ!

Telegram Group
Join Now

ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಅಂತ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ಇಂದು ಸುದ್ದಿಗಾರರ ಜೊತೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿದರು. ಈ ವೇಳೆ, ಜಿಬಿಎ ಚುನಾವಣೆಯಲ್ಲಿ (Elections) ಬಿಜೆಪಿ ಜೊತೆ ಮೈತ್ರಿ ಆಗ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಕಾರಣದಿಂದ ಆತಂಕ ಆಗುವುದಿಲ್ಲ. ಬಿಜೆಪಿ ಜೊತೆ ಮೈತ್ರಿ ಮುಂದುವರೆಯುತ್ತದೆ. ಜಿಲ್ಲಾ, ತಾಲೂಕು, ಜಿಬಿಎ, ವಿಧಾನಸಭೆ ಚುನಾವಣೆ ಸೇರಿ ಎಲ್ಲಾ ಚುನಾವಣೆಗಳಿಗೂ ಈ ಮೈತ್ರಿ ಮುಂದುವರೆಯಲಿದೆ ಎಂದು ತಿಳಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿಗೆ ಎಂದೂ ಆತಂಕ ಇಲ್ಲ. ಮೋದಿ ನನ್ನ ಸಂಬಂಧ ಯಾವುದೇ ಕಾರಣಕ್ಕೂ ಯಾರು ಬದಲಾವಣೆ ಮಾಡೋಕೆ ಆಗೊಲ್ಲ. ನಮ್ಮ ಅವರ ಸಂಬಂಧ 10 ವರ್ಷದಿಂದ ಉತ್ತಮವಾಗಿದೆ. ನಾನು ಕಳೆದ 10 ವರ್ಷಗಳಲ್ಲಿ ಮೋದಿ ಬಗ್ಗೆ ಲಘುವಾಗಿ ಮಾತಾಡಿಲ್ಲ. ಇದ್ದರೆ ತೋರಿಸಿ ಎನ್ನುವ ಮೂಲಕ ನನ್ನ ಮೋದಿ ಸಂಬಂಧ ಉತ್ತಮವಾಗಿದ್ದು, ಇದೇ ಮೈತ್ರಿಗೆ ಅಡಿಪಾಯ ಅಂತ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments