Monday, February 9, 2026
Homeಕ್ರೈಮ್ಹೊಳೆನರಸೀಪುರ: ಜಾತಿಗಣತಿಗೆ ತೆರಳುವಾಗ ನಾಯಿಗೆ ಸ್ಕೂಟರ್ ಡಿಕ್ಕಿ: ಶಿಕ್ಷಕಿಗೆ ಗಂಭೀರ ಗಾಯ

ಹೊಳೆನರಸೀಪುರ: ಜಾತಿಗಣತಿಗೆ ತೆರಳುವಾಗ ನಾಯಿಗೆ ಸ್ಕೂಟರ್ ಡಿಕ್ಕಿ: ಶಿಕ್ಷಕಿಗೆ ಗಂಭೀರ ಗಾಯ

ಹಾಸನ: ಜಾತಿಗಣತಿಗೆ ತೆರಳುವಾಗ ನಾಯಿಗೆ ಶಿಕ್ಷಕಿಯ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ಹೊಳೆನರಸೀಪುರದ ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.

ವಡ್ಡರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ರಾಧಾ ಗಾಯಗೊಂಡವರು. ಬೆಳಗ್ಗೆ 10 ಗಂಟೆ ಸಮಯದಲ್ಲಿ ಅವರು ಸಮೀಕ್ಷೆಗೆ ತೆರಳುತ್ತಿದ್ದರು. ಈ ವೇಳೆ ಅವರ ಸ್ಕೂಟರ್‍ಗೆ ನಾಯಿ ಅಡ್ಡ ಬಂದಿದ್ದು, ಡಿಕ್ಕಿಯಾಗಿ ಬಿದ್ದಿದ್ದಾರೆ. ರಸ್ತೆಗೆ ಬಿದ್ದಿದ್ದರಿಂದ ಅವರಿಗೆ ಗಂಭಿರ ಗಾಯಗಳಾಗಿವೆ.

ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದ ಶಿಕ್ಷಕಿಗೆ ಸ್ಥಳೀಯರು ಉಪಚಾರ ಮಾಡಿದ್ದಾರೆ. ಬಳಿಕ ಅವರನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!