Friday, August 14, 2026
Homeಬ್ರೇಕಿಂಗ್ ನ್ಯೂಸ್ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು!

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು!

Telegram Group
Join Now

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ವರ್ಷ ಅಷ್ಟೇ ಅಂದ್ರೆ 2024ರ ಫೆಬ್ರವರಿ 15ರಂದು ತೀವ್ರ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಇದೇ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಆರೋಗ್ಯವಾಗಿ ಡಿಸ್ಚಾರ್ಜ್ ಆಗಿದ್ದರು.

ಹೆಚ್‌ಡಿ ದೇವೇಗೌಡ ಅವರಿಗೆ 92 ವಯಸ್ಸಾಗಿದ್ದು, ವಯೋಸಹಜ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಆಗಾಗ ಆರೋಗ್ಯ ಕೈಕೊಡುತ್ತಲೇ ಇದೆ.  ಆದರೂ ಸಹ ದೊಡ್ಡಗೌಡರು ಸದ್ಯ ಸಕ್ರಿಯ ರಾಜಕಾರಣದಲ್ಲಿದ್ದು, ರಾಜ್ಯಸಭೆ ಸದಸ್ಯರಾಗಿದ್ದಾರೆ. ಈ ಇಳಿವಯಸ್ಸಿನಲ್ಲೂ ಹಾಸನ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದರು. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments