Saturday, February 7, 2026
Homeಕ್ರೈಮ್ಕೋಟ: ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚನೆ: ಇಬ್ಬರ ಬಂಧನ

ಕೋಟ: ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚನೆ: ಇಬ್ಬರ ಬಂಧನ

ಉಡುಪಿ: ಶಾಲಾ ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮೆ ಪಾಲಿಸಿ ಮಾಡಿ ಕೋಟ್ಯಂತರ ರೂ. ವಂಚಿಸುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

ಸಾಸ್ತಾನ ಕುಂಜಿಕೆರೆ ರಸ್ತೆಯ ರಾಕೇಶ ಎಸ್.(33) ಹಾಗೂ ಶಿರಸಿಯ ಚರಣ ಬಾಬು ಮೇಸ್ತ ಬಂಧಿತ ಆರೋಪಿಗಳು. ಆರೋಪಿಗಳು ನಕಲಿ ವಿಮೆ ಮೂಲಕ ಕೋಟ್ಯಂತರ ರೂ. ಹಣ ವಂಚನೆ ಎಸಗಿದ್ದಾರೆ ಎಂದರು.
2024ರ ನ.25ರಂದು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಬಾಡಿ – ಮಂಡಾಡಿ ಗ್ರಾಮದ ಹುಣ್ಸೆಮಕ್ಕಿ ಎಂಬಲ್ಲಿ ಶಾಲಾ ವಾಹನವೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಕುಂದಾಪುರ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು ರಿಕ್ಷಾದ ಚಾಲಕ ವಿಮಾ ಪರಿಹಾರವಾಗಿ 15,95,000ರೂ. ಹಣ ಕೋರಿಕೊಂಡಿದ್ದರು.

ಈ ಸಂಬಂಧ ವಿಮಾ ಕಂಪೆನಿಯವರು ಪರಿಶೀಲಿಸಿದಾಗ ಶಾಲಾ ಬಸ್ಸಿನ ವಿಮಾ ಪಾಲಿಸಿಯು ನಕಲಿ ಆಗಿರುವುದು ಕಂಡುಬಂದಿದೆ. ನಕಲಿ ವಿಮಾ ಪಾಲಿಸಿಯನ್ನು ಸೃಷ್ಟಿಸಿ ಠಾಣೆಗೆ ಹಾಗೂ ನ್ಯಾಯಾಲಯಕ್ಕೆ ಹಾಜರುಪಡಿಸಿ ಈ ಮೂಲಕ ವಿಮಾ ಕಂಪೆನಿಗೆ ಮೋಸ ಮಾಡಿರುವುದಾಗಿ ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಕಂಪೆನಿಯ ಮೇನೇಜರ್ ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಶೇಷ ತಂಡ ತನಿಖೆ ನಡೆಸಿದಾಗ ಈ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

ಶಾಲಾ ಕಾಲೇಜು ಬಸ್‌ಗಳೇ ಟಾರ್ಗೆಟ್

ತನಿಖಾ ತಂಡವು ಸೆ.6ರಂದು ಪ್ರಕರಣದ ಆರೋಪಿ ರಾಕೇಶ್‌ನನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ರಿಲಯನ್ಸ್ ಜನರಲ್ ಇನ್ಸೂರೆನ್ಸ್ ಕಂಪೆನಿ ಯಲ್ಲಿ ಎಸ್‌ಡಿಓ ಆಗಿದ್ದ ಚರಣ ಬಾಬು ಮೇಸ್ತನ ಜೊತೆ ಸೇರಿಕೊಂಡು ಕುಂದಾಪುರ, ಕೋಟ, ಬ್ರಹ್ಮಾವರ, ಶಿರೂರು, ಭಟ್ಕಳಗಳಲ್ಲಿನ ಶಾಲೆ ಹಾಗೂ ಕಾಲೇಜಿನ ಬಸ್ಸಿಗೆ ವಿಮೆ ಪಾಲಿಸಿ ಮಾಡುವುದಾಗಿ ನಂಬಿಸಿ ನಕಲಿ ವಿಮೆ ಪಾಲಿಸಿಯನ್ನು ಮಾಡಿ ಮೋಸ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!