Monday, August 10, 2026
Homeಜಿಲ್ಲಾಸುದ್ದಿಹಾಸನಾಂಬೆ ದೇವಿ ದರ್ಶನ ಪಡೆದ ರೇವಣ್ಣ ದಂಪತಿ: ಪ್ರಜ್ವಲ್​​​ ರೇವಣ್ಣ ಹೆಸರಿನಲ್ಲಿ ವಿಶೇಷ ಅರ್ಚನೆ

ಹಾಸನಾಂಬೆ ದೇವಿ ದರ್ಶನ ಪಡೆದ ರೇವಣ್ಣ ದಂಪತಿ: ಪ್ರಜ್ವಲ್​​​ ರೇವಣ್ಣ ಹೆಸರಿನಲ್ಲಿ ವಿಶೇಷ ಅರ್ಚನೆ

Telegram Group
Join Now

ಹಾಸನ: ಮಾಜಿ ಸಚಿವ ಹೆಚ್.ಡಿ.ರೇವಣ್ಣ ದಂಪತಿ ಹಾಸನಾಂಬೆಯ ದೇವಾಯಲಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದಿದ್ದಾರೆ. ಈ ವೇಳೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಎಚ್.ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ಜೈಲಿನಲ್ಲಿರುವ ತಮ್ಮ ಮಗ ಪ್ರಜ್ವಲ್​​​ ರೇವಣ್ಣ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ. ದೇವಿಯ ಮುಂದೆ ನಿಂತು ಮಗನಿಗಾಗಿ ಬೇಡಿಕೊಂಡಿದ್ದಾರೆ. 

ಮಾಜಿ ಪ್ರಧಾನಿ ಕುಟುಂಬದ ಹಿನ್ನೆಲೆಯಲ್ಲಿ ವಿಶೇಷ ಭದ್ರತೆ ಹೊಂದಿರುವ ರೇವಣ್ಣ ಅವರು ತಮ್ಮದೇ ಕಾರಿನಲ್ಲಿ ತಮ್ಮದೇ ಭದ್ರತಾ ವ್ಯವಸ್ಥೆಯೊಂದಿಗೆ ದೇವಿ ದರ್ಶನಕ್ಕೆ ಆಗಮಿಸಿದ್ದರು. ಈ ವೇಳೆ ಅವರ ಕಾರನ್ನ ತಡೆದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ರೇವಣ್ಣ ಗರಂ ಆಗಿದ್ದಾರೆ.

ಪತ್ನಿ ಭವಾನಿ ರೇವಣ್ಣ ಜೊತೆ ಸಾವಿರ ರೂ. ಟಿಕೆಟ್ ಪಡೆದು ನೇರ ದರ್ಶನಕ್ಕೆ ರೇವಣ್ಣ ಆಗಮಿಸಿದ್ದರು. ಬಳಿಕ ಅರ್ಧ ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ಸಲ್ಲಿಸಿದರು. ಹೆಚ್.ಡಿ.ದೇವೇಗೌಡರು, ಚೆನ್ನಮ್ಮ, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸೂರಜ್ ರೇವಣ್ಣ, ಪ್ರಜ್ವಲ್ ರೇವಣ್ಣ ಸೇರಿ ಕುಟುಂಬ ಸದಸ್ಯರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments