Tuesday, March 17, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಅ.19 ರಿಂದ 23 ರವರೆಗೆ ದೇವೀರಮ್ಮನವರ ದೀಪೋತ್ಸವ

ಚಿಕ್ಕಮಗಳೂರು: ಅ.19 ರಿಂದ 23 ರವರೆಗೆ ದೇವೀರಮ್ಮನವರ ದೀಪೋತ್ಸವ

ಚಿಕ್ಕಮಗಳೂರು: ತಾಲ್ಲೂಕು ಮಲ್ಲೇನಹಳ್ಳಿ ಬಿಂಡಿಗ ಆದಿಶಕ್ತ್ಯಾತ್ಮಕ ಶ್ರೀ ದೇವೀರಮ್ಮನವರ ದೀಪೋತ್ಸವ ಅ.19 ರಿಂದ 23ರವರೆಗೆ ನಡೆಯಲಿದೆ, ಬೆಟ್ಟ ಹತ್ತಲು ರಾತ್ರಿ ಎಂದು 2 ದಿನ ಅವಕಾಶ ಕಲ್ಪಿಸಲಾಗಿದೆ ದೇವೀರಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷ ಕುಲಶೇಖರ್ ಸ್ಥಾಪಿಸಿದ್ದಾರೆ.

ಅವರು ಇಂದು ದೇವಸ್ಥಾನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು, ಅ.19 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹಾಗೂ ಅ.20 ರಂದು ಬೆಳಗ್ಗೆ 7 ಗಂಟೆಯಿಂದ ಬೆಟ್ಟ ಹತ್ತಲು ಭಕ್ತರಿಗೆ ಅವಕಾಶ ನೀಡಲಾಯಿತು, ಗಿರಿಪ್ರದೇಶದಲ್ಲಿ ಈ ಬಾರಿ ಅತಿ ಹೆಚ್ಚು ಮಳೆಯಾಗುತ್ತಿದೆ ಕಾರಣ ರಾತ್ರಿ ಬೆಟ್ಟ ಹತ್ತಲು ನಿಷೇಧಿಸಲಾಗಿದೆ.

ಅ.19 ರಂದು ಬೆಳಗ್ಗೆ 7 ಗಂಟೆಗೆ ಬೆಟ್ಟದಲ್ಲಿ ಅಭಿಷೇಕ, ಪೂಜಾ ಕಾರ್ಯಕ್ರಮಗಳು ನಡೆದ ಬಳಿಕ 9 ರಿಂದ 5 ಗಂಟೆಯವರೆಗೆ ದೇವೀರಮ್ಮ ದೇವಿಯವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 20 ರಂದು 3 ಗಂಟೆಯವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶವಿದ್ದು, ಸಂಜೆ 7 ಗಂಟೆಗೆ ದೀಪೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

೨೧ ರಂದು ದೇವೀರಮ್ಮ ದೇವಸ್ಥಾನದಲ್ಲಿ ದೇವಿಯವರಿಗೆ ಉಡುಗೆ ಪೂಜೆ, ಸಂಜೆ ೬.೩೦ಕ್ಕೆ ಬೆಣ್ಣೆಬಟ್ಟೆ ಸುಡುವುದು ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ೨೨ ರಂದು ಮಹಾಗಣಪತಿ ಪೂಜೆ, ಕುಂಕುಮಾರ್ಚನೆ ಇತ್ಯಾದಿ. ೨೩ ರಂದು ಮಹಾಮಂಗಳಾರತಿ, ಹರಕೆ ಒಪ್ಪಿಸುವುದು, ತೀರ್ಥಪ್ರಸಾದ ವಿನಿಯೋಗ.

ಶ್ರೀ ಕ್ಷೇತ್ರದಲ್ಲಿ ನಡೆಯುವ ಪ್ರಸಾದ ವಿನಿಯೋಗಕ್ಕೆ ಅಕ್ಕಿ, ಬೇಳೆ, ಎಣ್ಣೆ ಹಾಗೂ ಧನಸಹಾಯ ಮಾಡುವವರು ಕ್ಷೇತ್ರಕ್ಕೆ ಒಪ್ಪಿಸುತ್ತಾರೆ. ಬೆಟ್ಟದ ಮೇಲೆ ತೆಂಗಿನಕಾಯಿ ಒಡೆಯುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.

ದೇವಿಯ ದರ್ಶನವಾದ ಬಳಿಕ ಬೆಟ್ಟದ ಮೇಲೆ ಕುಳಿತುಕೊಳ್ಳದೆ ಕೆಳಗೆ ಇಳಿಯಬೇಕು, ಬೆಟ್ಟದ ಹಾಗೂ ದೇವಸ್ಥಾನದ ಸುತ್ತಮುತ್ತಲಿನ ಪ್ಲಾಸ್ಟಿಕ್ ಇತ್ಯಾದಿ ತ್ಯಾಜ್ಯ ವಸ್ತುಗಳನ್ನು ಎಸೆಯಬಾರದು, ದೇವಸ್ಥಾನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ, ತರೀಕೆರೆ, ಬೀರ, ಕಡೂರು, ಚಿಕ್ಕಮಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಮಾಡಲಾಗಿದೆ.

ಬೆಟ್ಟದಲ್ಲಿ ಪಟಾಕಿ ಒಡೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ, ಭಕ್ತರು ಸ್ವಚ್ಛತೆ ಕಾಪಾಡುವ ಜೊತೆಗೆ ಪರಿಸರದ ಕಾಳಜಿಯನ್ನು ಹೊಂದಿದ್ದಾರೆ ಹೊಂದಬೇಕು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!