Monday, February 9, 2026
Homeಜಿಲ್ಲಾಸುದ್ದಿಹಾಸನಾಂಬ ದರ್ಶನ ಪಡೆದ ಡಿ.ಕೆ.ಶಿವಕುಮಾರ್:‌ ಪೂಜೆ ವೇಳೆ ಬಲಗಡೆ ಹೂವು ವರ ನೀಡಿದ ದೇವಿ

ಹಾಸನಾಂಬ ದರ್ಶನ ಪಡೆದ ಡಿ.ಕೆ.ಶಿವಕುಮಾರ್:‌ ಪೂಜೆ ವೇಳೆ ಬಲಗಡೆ ಹೂವು ವರ ನೀಡಿದ ದೇವಿ

ಹಾಸನ: ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಗೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಹಾಸನಾಂಬೆ ಸನ್ನಿಧಿಯಲ್ಲಿ ಮಹಾಪ್ರಸಾದ ಸಿಕ್ಕಿದೆ


ಮಂಗಳವಾರ ರಾತ್ರಿ ಪತ್ನಿಯೊಂದಿಗೆ ಹಾಸನಾಂಬೆ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಡಿಸಿಎಂಗೆ ವಿಜಯೀ ಶ್ರೇಯಸ್ಸು ಲಭಿಸಲೆಂದು ನಾರಾಯಣಿ ನಮಸ್ಕಾರ ಮಂತ್ರದ ಮೂಲಕ ಪೂಜೆ. ಸಲ್ಲಿಸಲಾಯಿತು. ಸುಮಾರು ಐದು ನಿಮಿಷ ದುರ್ಗಾ ಸಪ್ತಸತಿಯ 11ನೇ ಅಧ್ಯಾಯದ ನಾರಾಯಣಿ ನಮಸ್ಕಾರ ಮಂತ್ರ ಹೇಳಿ ಅರ್ಚಕರು ಪೂಜೆ ನೆರವೇರಿಸಿದರು.

ಮಂಗಳವಾರ ರಾತ್ರಿ ಡಿಸಿಎಂ ಭೇಟಿ ನೀಡಿದ ಪೂಜೆ ಸಲ್ಲಿಸಿದ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಹಾಸನಾಂಬ ಸನ್ನಿಧಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಆಗಮಿಸಲಿದ್ದು, ಅಲ್ಲಿಂದ ಹಾಸನಾಂಬೆ ದರ್ಶನಕ್ಕೆ ತೆರಳಲಿದ್ದಾರೆ. ದರ್ಶನ ಪಡೆದು ಮಧ್ಯಾಹ್ನ 12 ಗಂಟೆಗೆ ವಾಪಸ್ ಆಗಲಿದ್ದಾರೆ. ಕಳೆದ 2 ವರ್ಷಗಳಿಂದ ಸಿಎಂ ಹಾಸನಾಂಬೆ ದರ್ಶನ ಪಡೆಯುತ್ತಿರುವುದು ಗಮನಾರ್ಹ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!