Thursday, March 26, 2026
Homeಜಿಲ್ಲಾಸುದ್ದಿಮೂಡಿಗೆರೆ: TAPCMS ಚುನಾವಣೆ: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ!

ಮೂಡಿಗೆರೆ: TAPCMS ಚುನಾವಣೆ: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ!

ಮೂಡಿಗೆರೆ: ತಾಲೂಕಿನ ಟಿಎಪಿಸಿಎಂಎಸ್‌ ಸಂಸ್ಥೆಯ ನಿರ್ದೇಶಕರ ಆಯ್ಕೆಗೆ ನವೆಂಬರ್ 2ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ನಾಮಪತ್ರವನ್ನು ಇಂದು ಸಲ್ಲಿಸಿದರು.

ನಾಮಪತ್ರ ಸಲ್ಲಿಸಿ ಬಳಿಕ ಮಾತನಾಡಿದ ಅನುಕುಮಾರ್ ಶನಾವು ಮಾಡಿರುವ ಕೆಲಸ, ಸಾಧನೆ ನೋಡಿ ಮತದಾರರು ನಮ್ಮ ಕೈ ಹಿಡಿಯುತ್ತಾರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಸಹಕಾರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಈ ಚುನಾವಣೆಗೆ ಜೆಡಿಎಸ್ ಸಹಕಾರ ಸಿಕ್ಕಿರುವುದು ನಮ್ಮ ಸೌಭಾಗ್ಯ. ನಮ್ಮ ಪಕ್ಷದ ಕಾರ್ಯಕರ್ತರು ನೂರಕ್ಕೆ ನೂರರಷ್ಟು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಆನೇಕ ಪಕ್ಷದ ಮುಖಂಡರು ಬಿಜೆಪಿ ಸೇರುತ್ತಿದ್ದಾರೆ. ಕಾಂಗ್ರೆಸ್ ಮುಳುಗುತ್ತಿರುವ ದೊಡ್ಡ ಹಡಗು ಎಂಬುದಕ್ಕೆ ಇದೊಂದು ಸಾಕ್ಷಿ ಎಂದರು.

ಗೆಲುವು ಕಟ್ಟಿಟ್ಟ ಬುತ್ತಿ ಮೈತ್ರಿ ಅಭ್ಯರ್ಥಿಗಳ. ನಾಮಪತ್ರ ಸಲ್ಲಿಕೆಗೆ ನೆರೆದಿದ್ದ ಜನಸ್ತೋಮವೇ ಇದಕ್ಕೆ ಸಾಕ್ಷಿ‌. ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!