Tuesday, August 11, 2026
Homeಕ್ರೈಮ್ಕಳಸ: ಈಜಲು ತೆರಳಿದ್ದ ಯುವಕ ನೀರುಪಾಲು!

ಕಳಸ: ಈಜಲು ತೆರಳಿದ್ದ ಯುವಕ ನೀರುಪಾಲು!

Telegram Group
Join Now

ಕಳಸ: ಈಜಲು ತೆರಳಿದ್ದ ತಮಿಳುನಾಡು ಮೂಲದ ಯುವಕ ನೀರುಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೋಟೆಹೊಳೆ ಗ್ರಾಮದಲ್ಲಿ ನಡೆದಿದೆ. ದುರ್ಘಟನೆಯಲ್ಲಿ 19 ವರ್ಷದ ಸೂರ್ಯ ಸಾವನ್ನಪ್ಪಿದ್ದಾನೆ.

ಈತ ಮೂಲತಃ ತಮಿಳುನಾಡು ಮೂಲದವನಾಗಿದ್ದು, ಕಳಸ ತಾಲೂಕಿನ ಕೋಟೆಹೊಳೆ ಗ್ರಾಮದ ಬಳಿ ಇರುವ ಕಾಫಿ ತೋಟವೊಂದಕ್ಕೆ ಕೆಲಸಕ್ಕಾಗಿ ಬಂದಿದ್ದನು.

ಸೂರ್ಯ ಭದ್ರಾ ನದಿಯಲ್ಲಿ ಈಜಲು ತೆರಳಿದ್ದಾಗ ಆಳದ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಕೂಡಲೇ ಮೃತದೇಹಕ್ಕಾಗಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಘಟನೆಯ ಸಂಬಂಧ ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments