ಹಾಸನ : ಶ್ರವಣಬೆಳಗೊಳಕ್ಕೆ ನ.09 ರಂದು ಮಾನ್ಯ ಉಪ ರಾಷ್ಟ್ರಪತಿ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶ್ರವಣಬೆಳಗೊಳದ ಪ್ರವಾಸಿ ಮಂದಿರದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಯಾವುದೇ ಲೋಪಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಿದರಲ್ಲದೆ, ಅಧಿಕಾರಿಗಳು ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಡಿಕೊಂಡಿರುವ ತಯಾರಿ ಬಗ್ಗೆ ವರದಿ ನೀಡುವಂತೆ ತಿಳಿಸಿದರು.
ಮಾರ್ಗಸೂಚಿಯಂತೆ ವೇದಿಕೆ ಮೇಲೆ ಎಲ್ಲಾ ಕುರ್ಚಿಗಳು ಒಂದೇ ರೀತಿ ಇರಬೇಕು. ಪ್ರತಿಯೊಬ್ಬರು ತಮ್ಮ ತಮ್ಮ ಜವಾಬ್ದಾರಿಯನ್ನು ಎಚ್ಚರಿಕೆಯಿಂದ ನಿರ್ವಹಿಸಿ ಎಂದು ತಿಳಿಸಿದರಲ್ಲದೆ, ಎಸ್ಕಾರ್ಟ್ಸ್ ವಾಹನಗಳ ಸಂಖ್ಯೆ, ಯಾವ ಮಾದರಿ ವಾಹನ ಹಾಗೂ ವಾಹನ ಚಾಲಕರ ಮೊಬೈಲ್ ನಂಬರ್ ಪಡೆದುಕೊಳ್ಳಿ ಎಂದು ತಿಳಿಸಿದರು.
ನಿರಂತರವಾಗಿ ವಿದ್ಯುತ್ ಸಂಪರ್ಕ ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಕಾರ್ಯಕ್ರಮದ ಸ್ಥಳದಲ್ಲಿ ಸಿ.ಸಿ.ಕ್ಯಾಮರ ಅಳವಡಿಸುವಂತೆ ಸೂಚನೆ ನೀಡಿದರು.
ರಸ್ತೆಗಳ ಅಕ್ಕಪಕ್ಕದಲ್ಲಿ ಸ್ವಚ್ಚತೆಗೆ ಕ್ರಮ, ಕಾರ್ಯಕ್ರಮದ ದಿನದಂದು ತಾತ್ಕಾಲಿಕವಾಗಿ ಮಟ್ಟನ್, ಚಿಕನ್ ಅಂಗಡಿಗಳ ಮುಚ್ಚಲು ಕ್ರಮವಹಿಸಿ ಎಂದರಲ್ಲದೆ, ಬೀದಿ ನಾಯಿಗಳ ಹಾವಳಿ ತಡೆಗೆ ಕೂಡ ಕ್ರಮವಹಿಸುವಂತೆ ತಿಳಿಸಿದರಲ್ಲದೆ, ಸೈನೇಜ್ ಬೋರ್ಡ್ ಹಾಕುವಂತೆ ಸೂಚಿಸಿದರು.
