ಶೃಂಗೇರಿ: ರೋಟರಿ ಕ್ಲಬ್ ಹಾಗೂ ಇನ್ನರ್ವೀಲ್ ಕ್ಲಬ್ ಸಹಯೋಗದೊಂದಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಶೃಂಗೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಆ ನಂತರ ರೋಟರಿ ಕ್ಲಬ್ ಅಧ್ಯಕ್ಷರಾದ ಸುಬ್ರಮಣ್ಯ ಅಂಬಲಮನೆ ಕಾರ್ಯಕ್ರಮವನ್ನು ಉದ್ದೇಶಿಸಿ ಕನ್ನಡವನ್ನು ಉಳಿಸಿ ಬೆಳೆಸಿ ಕನ್ನಡಿಗರಾಗಿ ನಾವು ಹೆಚ್ಚು ಹೆಚ್ಚು ಕನ್ನಡ ಪದಗಳ ಬಳಕೆಯಿಂದ ಕನ್ನಡ ನಾಡನ್ನು ಉಳಿಸೋಣವೆಂದು ತಿಳಿಸಿದರು.

ಸುಧೀರ್ಘವಾಗಿ 33 ವರ್ಷಗಳ ಕಾಲ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ನಿವೃತ್ತ ಶಿಕ್ಷಕರು ಹಾಗೂ ರೋಟರಿಯ ಹಿರಿಯ ಸದಸ್ಯರಾದ ಶ್ರೀನಿವಾಸ್ ಹೆಚ್.ಎ. ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಿಗೆ ಕನ್ನಡ ಗೀತ ಗಾಯನ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಹಾಗೂ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ 6 ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ಹಾಗೆ ಈ ಕಾರ್ಯಕ್ರಮದಲ್ಲಿ ಇನ್ನರ್ವೀಲ್ ಅಧ್ಯಕ್ಷರಾದ ಮಂಜುಳಾ ಸುಬ್ರಮಣ್ಯ, ರೋಟರಿ ಕಾರ್ಯದರ್ಶಿಯಾದ ಪ್ರಿಯದರ್ಶಿನಿ ಹೆಗಡೆ, ಶಾಲೆಯ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ರಾಜೇಶ್, ಉಪ ಪ್ರಾಂಶುಪಾಲರಾದ ಶಶಿಧರ್ ಕೆ., ಶಾಲೆಯ ಎಸ್. ಡಿ. ಎಂ. ಸಿ. ಮಾಜಿ ಅಧ್ಯಕ್ಷರಾದ ಆನಂದ ಸ್ವಾಮಿ ಹಾಗೂ ಸದಸ್ಯರು, ಇನ್ನರ್ವೀಲ್ ಕ್ಲಬ್ ನ ಮಾಜಿ ಅಧ್ಯಕ್ಷರಾದ ಚರಿತ ಸುಜನ್ ಉಪಸ್ಥಿತರಿದ್ದರು.
ವರದಿ: ವಿಠಲ್ ಶೃಂಗೇರಿ
7676798969
