ಹಾಸನ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಅಧಿಕಾರ ವಹಿಸಿಕೊಂಡ ನಂತರ ಇಂದು ಹಾಸನ ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡಲಿದ್ದಾರೆ.
ಹೌದು .. ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ 4ನೇ ಬೆಟ್ಟದ ಪದನಾಮ ಅನಾವರಣ ಹಾಗೂ ಆಚಾರ್ಯ ಶ್ರೀ 108ನೇ ಶಾಂತಿಸಾಗರ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಮಹೋತ್ಸವ ಜರುಗಲಿದೆ. ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿರಲಿದ್ದಾರೆ.
ನಂತರ ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಅಂಗ ಸಂಸ್ಥೆಯಾಗಿರುವ ಮೈಸೂರಿನಲ್ಲಿರುವ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಹದಿನಾರನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪದವಿ ಪಡೆದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
