Tuesday, August 11, 2026
Homeಕ್ರೈಮ್ಚಿಕ್ಕಮಗಳೂರು: ದೆಹಲಿ ಬಾಂಬ್‌ ಸ್ಫೋಟ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೈ ಅಲರ್ಟ್!

ಚಿಕ್ಕಮಗಳೂರು: ದೆಹಲಿ ಬಾಂಬ್‌ ಸ್ಫೋಟ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೈ ಅಲರ್ಟ್!

Telegram Group
Join Now

ಚಿಕ್ಕಮಗಳೂರು: ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭದ್ರತಾ ಕ್ರಮಗಳು ಹೆಚ್ಚಿಸಲಾಗಿದೆ. ಕಾಫಿನಾಡು ಗಡಿ ಭಾಗಗಳಲ್ಲಿ ಪೊಲೀಸರು ಕಡ್ಡಾಯ ತಪಾಸಣೆ ಆರಂಭಿಸಿದ್ದಾರೆ

ಹೌದು .. ಚಿಕ್ಕಮಗಳೂರು ಜಿಲ್ಲೆಗೆ ಬರುವ ಹಾಗೂ ಜಿಲ್ಲೆಯಿಂದ ಹೊರ ಹೋಗುವ ಪ್ರತಿಯೊಂದು ವಾಹನಗಳನ್ನು ಕಟ್ಟು ನಿಟ್ಟಾಗಿ ತಪಾಸಣೆ ಮಾಡಲಾಗುತ್ತಿದೆ. ವಿಶೇಷವಾಗಿ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸೇರಿದಂತೆ ದಕ್ಷಿಣ ಕನ್ನಡ ಚಿಕ್ಕಮಗಳೂರು ಗಡಿ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.

ಬೆಳಿಗ್ಗೆಯಿಂದಲೂ ಕೊಟ್ಟಿಗೆಹಾರ ಗಡಿ ತಪಾಸಣಾ ನಾಕದಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದು ಅವರ ವಿವರನ್ನು ಸಂಗ್ರಹಿಸುತ್ತಿದ್ದಾರೆ.

ಅರಣ್ಯ ಪ್ರದೇಶಗಳು ಹಾಗೂ ಬೆಟ್ಟಗಾಡು ಪ್ರದೇಶಗಳಿಂದ ಕೂಡಿದ ಚಿಕ್ಕಮಗಳೂರು ಮಂಗಳೂರು ಜಿಲ್ಲೆಗಳು ಸೂಕ್ಷ್ಮವೆಂದು ಪರಿಗಣಿಸಲ್ಪಟ್ಟು ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್‌ ಘೋಷಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments