Monday, August 10, 2026
Homeಜಿಲ್ಲಾಸುದ್ದಿಶೃಂಗೇರಿ: ಕೆರೆಕಟ್ಟೆ ಗ್ರಾಮದಲ್ಲಿ ಮತ್ತೆ ಕಾಣಿಸಿಕೊಂಡ ಮತ್ತೊಂದು ಕಾಡಾನೆ!

ಶೃಂಗೇರಿ: ಕೆರೆಕಟ್ಟೆ ಗ್ರಾಮದಲ್ಲಿ ಮತ್ತೆ ಕಾಣಿಸಿಕೊಂಡ ಮತ್ತೊಂದು ಕಾಡಾನೆ!

Telegram Group
Join Now

ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮದಲ್ಲಿ ಮತ್ತೆ ಕಾಡಾನೆ ಕಾಣಿಸಿಕೊಂಡಿದ್ದು ಜನರಲ್ಲಿ ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ಹೌದು .. ಇತ್ತೀಚಿಗಷ್ಟೇ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮದಲ್ಲಿ ಇಬ್ಬರು ರೈತರನ್ನು ಕಾಡಾನೆ ಬಲಿ ಪಡೆದಿದ್ದು ಜನರಲ್ಲಿ ಭಯದ ವಾತವರಣ ಮಾಸುವ ಮುನ್ನವೇ ಮತ್ತೆ ಇದೇ ಜಾಗದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು ಜನರಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಭಯ ಆವರಿಸಿದೆ.

 ಶೃಂಗೇರಿ ತಾಲೂಕಿನಲ್ಲಿ ಅಕ್ಟೋಬರ್‌ 31ರಂದು ಶುಕ್ರವಾರ ಮುಂಜಾನೆ ಭೀಕರ ದುರಂತವೊಂದು ಸಂಭವಿಸಿದ್ದು, ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬಾ ಎಲ್ಸಾರ ಸಮೀಪ ಈ ಘಟನೆ ನಡೆದಿದೆ.

ಈ ಘಟನೆಯಿಂದಾಗಿ ಸ್ಥಳೀಯರಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿದ್ದು, ದುರಂತದಿಂದಾಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments