Saturday, August 8, 2026
Homeಕ್ರೈಮ್ಚಿಕ್ಕಮಗಳೂರು: ಶಿವಮೊಗ್ಗ ಜೈಲಿನಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಸಾವು!

ಚಿಕ್ಕಮಗಳೂರು: ಶಿವಮೊಗ್ಗ ಜೈಲಿನಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಸಾವು!

Telegram Group
Join Now

 ಚಿಕ್ಕಮಗಳೂರು: ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಚಿಕ್ಕಮಗಳೂರು ಮೂಲದ ಕೈದಿ ಬಾಬು ಕೆ ಪಿ ಅಲಿಯಾಸ್ ಸಜಿ ಬಾಬು ಅವರು ಬುಧವಾರ ಬೆಳಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ಕೊನೆಯುಸಿರೆಳೆದಿದ್ದಾರೆ.

ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಬುನನ್ನು ನ.10ರಂದು ಬೆಳಗ್ಗೆ 5 ಗಂಟೆಗೆ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ 5.40ರ ಹೊತ್ತಿಗೆ ಸಾವನ್ನಪ್ಪಿದ್ದಾನೆ.

ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಬುಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಕಳೆದ ಆಗಸ್ಟ್ 22ರಂದು ಬಾಬುನನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments