ಮೂಡಿಗೆರೆ : ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಮಕ್ಕಳ ದಿನವನ್ನು ದಾರದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಿದಾಳು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.
ಸರ್ಕಾರಿ, ಖಾಸಗಿ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ಮಕ್ಕಳಿಗಾಗಿ ವಿವಿಧ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಮಕ್ಕಳು ವಿವಿಧ ವೇಷಭೂಷಣ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅತಿಥಿಗಳಿಗೆ ಪುಟಾಣಿ ಮಕ್ಕಳೇ ಗುಲಾಬಿ ಹೂವು ನೀಡಿ ಸ್ವಾಗತಿಸಿ ಖುಷಿಪಟ್ಟರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ಮಾತನಾಡಿ, ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ಮಾಡುವ ಮಹತ್ವದ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ನುಡಿದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ವೀಣಾ ಮೇನಜಸ್, ಸಹ ಶಿಕ್ಷಕಿ ಶಾಹೀನ, ಸ್ಥಳೀಯರಾದ ಕುಮಾರ್, ಧರ್ಮೇಶ್, SDMC ಅಧ್ಯಕ್ಷ ವಿಶ್ವನಾಥ್, ಶೋಭಾ, ಹೇಮಾವತಿ, ಜಗದೀಶ್, ಅಂಗನವಾಡಿ ಶಿಕ್ಷಕಿ ನಂದಿನಿ, ಸಹಾಯಕಿ ರತ್ನ ಸೇರಿದಂತೆ SDMC ಪದಾಧಿಕಾರಿಗಳು, ಗ್ರಾಮಸ್ಥರು ವಿದ್ಯಾರ್ಥಿಗಳು ಇದ್ದರು
ವರದಿ :ಪುನೀತ್ ಕಡಿದಾಳು
9483811948
