Monday, February 9, 2026
Homebig breaking ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ಡಿಕ್ಕಿ; ಕಾರಿನಲ್ಲಿದ್ದ...

 ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ಡಿಕ್ಕಿ; ಕಾರಿನಲ್ಲಿದ್ದ ಮೂವರು ಸಾವು

 ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ  ಬಿಸಿ ರೋಡ್ ನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಲ್ಲಿ ಶನಿವಾರ ಮುಂಜಾನೆ ನಡೆದಿದೆ.


ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75), ರಮ್ಯಾ(23) ಮೃತರು. ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಸೇರಿದಂತೆ ಉಳಿದ 6 ಜನರು ರವರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಬೆಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಟ್ಟು 9 ಮಂದಿ ಇದ್ದರು ಅದರಲ್ಲಿ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದವಲೂ ಸಂಬಂಧಿಕರು ಎಂದು ಹೇಳಲಾಗಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ, ರಸ್ತೆಯಲ್ಲಿದ್ದ ವಾಹನವನ್ನು ತೆರವುಗೊಳಿಸಿದ್ದಾರೆ. ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!