Saturday, February 7, 2026
Homeಆರೋಗ್ಯಹಾಸನ: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು: ಶಬರಿಮಲೆ ಯಾತ್ರಿಕರಿಗೆ  ಆರೋಗ್ಯ ಇಲಾಖೆ ಮಹತ್ವದ ಮಾರ್ಗಸೂಚಿ

ಹಾಸನ: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು: ಶಬರಿಮಲೆ ಯಾತ್ರಿಕರಿಗೆ  ಆರೋಗ್ಯ ಇಲಾಖೆ ಮಹತ್ವದ ಮಾರ್ಗಸೂಚಿ

ಹಾಸನ : ಕೇರಳ ರಾಜ್ಯದಲ್ಲಿ ನೇಗೇರಿಯಾ ಫೌಲೇರಿ ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ನೆಫಲೈಟಿಸ್ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಶಬರಿಮಲೆ ಯಾತ್ರಿಕರಿಗೆ ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ/ ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಸಲಹೆಗಳನ್ನು ನೀಡಲಾಗಿದೆ.

ನೇಗೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ.
ಉದಾಹರಣೆಗೆ ನಿಂತ ನೀರು, ಕೊಳ/ಈಜು ಕೊಳಗಳು ಹಾಗೂ ಕೆರೆ. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.

ನೆಗ್ರೇರಿಯಾ ಫೌಲರಿ ಅತ್ಯಂತ ವಿಷಕಾರಿ  ಸೂಕ್ಷ್ಮ ಜೀವಿ ಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ನಫಲೈಟಿಸ್ ಎನ್ನುವ ಅಪರೂಪದ ಗಂಭೀರ/ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ರಿಪ್ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸಿ.

ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವ್ರ ತಲೆನೋವು ವಾಕರಿಕೆ/ ವಾಂತಿ, ಕುತ್ತಿಗೆ ಬಿಗಿತ, ಗೊಂದಲ/ ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ/ ವೈದ್ಯರನ್ನು ಸಂಪರ್ಕಿಸಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!