ಉಡುಪಿ: ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಬಂಧಿತರು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾಗಿ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.
ಇಬ್ಬರು ಆರೋಪಿಗಳು ಸುಷ್ಮಾ ಮೇರಿನ್ ಪ್ರೈವೇಟ್ ಲಿಮಿಟೆಡ್ ಮೂಲಕ ಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದರು. ಭಾರತೀಯ ನೌಕಾಪಡೆಗೆ ಟಗ್ ಗಳನ್ನು ನಿರ್ಮಿಸಿ ಕೊಡುವ ಸಂಸ್ಥೆ ಕೊಚ್ಚಿನ್ ಶಿಪ್ ಯಾರ್ಡ್
ಖಾಸಗಿಯವರಿಗೂ ನೌಕೆಗಳನ್ನು ನಿರ್ಮಿಸಿ ಕೊಡುವ ಸಂಸ್ಥೆಯಾಗಿದ್ದು ಇದು ಕೇರಳದಲ್ಲಿ ಮುಖ್ಯ ಕಚೇರಿ ಹೊಂದಿರುವ ಕೊಚ್ಚಿನ್ ಶಿಪ್ ಯಾರ್ಡ್ ಆಗಿತ್ತು.
ಕಳೆದ ಒಂದೂವರೆ ವರ್ಷಗಳಿಂದ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಆಸಾಮಿಗಳು ಕೊಚ್ಚಿನ್ ಶಿಪ್ ಪ್ಯಾಡ್ ಸಿ ಇಒ ದೂರಿನ ಆಧಾರದಲ್ಲಿ ಬಂಧನ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಉಡುಪಿ ಪೊಲೀಸರು ಹೆಚ್ಚಿನ ತನಿಖೆಗೆ ನ್ಯಾಷನಲ್ ಏಜೆನ್ಸಿಗಳು ಪಾಲ್ಗೊಳ್ಳುವ ಸಾಧ್ಯತೆ ಇದೆ.
ರೋಹಿತ್ ಈ ಹಿಂದೆ ಕೇರಳದಲ್ಲಿ ಕೆಲಸ ಮಾಡುತ್ತಿದ್ದ ಗೌಪ್ಯ ಮಾಹಿತಿ ಕೊಟ್ಟು ಹಣ ಪಡೆದ ಆರೋಪ ಕೂಡ ಕೇಳಿ ಬಂದಿದೆ. ಕೇರಳದಲ್ಲಿ ಕೆಲಸ ಮಾಡುವಾಗ ಹಡಗುಗಳ ಗೌಪ್ಯ ಪಟ್ಟಿ, ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಹಂಚಿಕೊಂಡಿದ್ದ ಆರೋಪ ಹಾಗೆ ಮಲ್ಪೆಯ ಕೊಚ್ಚಿನ್ ಶಿಪ್ ಯಾರ್ಡ್ ಗೆ ಬಂದ ನಂತರವೂ ಮಾಹಿತಿ ಹಂಚಿಕೊಂಡಿದ್ದ ಆರೋಪ ಹಾಗೆ ಮಾಹಿತಿ ಹಂಚಿಕೊಂಡು ಹಣ ಪಡೆದು ಅಕ್ರಮ ಲಾಭ ತದಾನಂತರ ಉಡುಪಿಯ ಮಲ್ಪೆ ಶಿಪ್ ಯಾರ್ಡ್ ಗೆ ಬಂದ ನಂತರವೂ ಮಾಹಿತಿ ಹಂಚಿಕೆ ಮಾಡುತ್ತಿದ್ದರು ಈ ಇಬ್ಬರು ದೇಶದ ಸಾರ್ವಭೌಮತೆಗೆ ದಕ್ಕೆ ತರುವ ಕೆಲಸ ಮಾಡಿರುವ ಆರೋಪಿಗಳು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.
