Monday, February 9, 2026
Homeಕ್ರೈಮ್ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜಾಮೀನು ಮಂಜೂರು!

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜಾಮೀನು ಮಂಜೂರು!

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಆರೋಪಿ ಚಿನ್ನಯ್ಯನಿಗೆ ಜಾಮೀನು ಸಿಕ್ಕಿದೆ.

ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯ ಬಂಧನವಾಗಿತ್ತು. ಸೆಪ್ಟೆಂಬರ್ 6 ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!