Saturday, March 14, 2026
Homeಜಿಲ್ಲಾಸುದ್ದಿಕೊಪ್ಪ: ನುಗ್ಗಿ ಗ್ರಾ.ಪಂನಲ್ಲಿ 14 ಜನ ಫಲಾನುಭವಿಗಳಿಗೆ ಸೋಲಾರ್ ದೀಪ ವಿತರಣೆ!

ಕೊಪ್ಪ: ನುಗ್ಗಿ ಗ್ರಾ.ಪಂನಲ್ಲಿ 14 ಜನ ಫಲಾನುಭವಿಗಳಿಗೆ ಸೋಲಾರ್ ದೀಪ ವಿತರಣೆ!

ಕೊಪ್ಪ: ನುಗ್ಗಿ ಗ್ರಾಮ ಪಂಚಾಯಿತಿಯ ವಿಶೇಷ ಚೇತನರ ಸಮನ್ವಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದವರ ಗ್ರಾಮ ಸಭೆ ಹಾಗೂ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಗ್ರಾಮ ಪಂಚಾಯಿತಿಯ ಶೇಕಡ 25ರ ಅನುದಾನದಲ್ಲಿ 14 ಜನ ಫಲಾನುಭವಿಗಳಿಗೆ ಸೋಲಾರ್ ದೀಪ ವಿತರಣೆ ಮಾಡಲಾಯಿತು.

ಈ ವೇಳೆ ಈ ಹಿಂದೆ ಮೂರುವರೆ ವರ್ಷಗಳ ಕಾಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಶ್ರೀ ಪ್ರದೀಪ್ ಎಸ್ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ನೆರವೇರಿಸಲಾಯಿತು.

ಈ ಕಾರ್ಯಕ್ರಮಗಳಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ, ಉಪಾಧ್ಯಕ್ಷರಾದ ಶ್ರೀ ಹರೀಶ್ ಬಿ , ಗ್ರಾಮ ಪಂಚಾಯಿತಿಯ ಸದಸ್ಯರಾದ ಶ್ರೀ ಜಗದೀಶ್ ಎಚ್ ಆರ್ , ಶ್ರೀಮತಿ ರೇಖಾ , ಶ್ರೀಮತಿ ಗುಲಾಬಿ, ಶ್ರೀಮತಿ ಮಂಜುಳಾ , ಶ್ರೀಮತಿ ಕುಸುಮ ಹಾಗೂ ಶ್ರೀ ರಾಘವೇಂದ್ರ ಹಾಗೂ ನುಗ್ಗಿ ಗ್ರಾಮ ಪಂಚಾಯಿತಿಯ ನೂತನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಾನ್ ಪಾಲ್ ಮತ್ತು ಕಾರ್ಯದರ್ಶಿ ವಸಂತ್ ಕುಮಾರ್ ಮತ್ತು ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!