Wednesday, March 25, 2026
Homeಜಿಲ್ಲಾಸುದ್ದಿಉಡುಪಿ: ಶುಕ್ರವಾರ ಪ್ರಧಾನಿ ಭೇಟಿ : 3000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು!

ಉಡುಪಿ: ಶುಕ್ರವಾರ ಪ್ರಧಾನಿ ಭೇಟಿ : 3000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು!

ಉಡುಪಿ: ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಆಗಮಿಸಲಿದ್ದಾರೆ. ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಯೋಜಿಸಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಉಡುಪಿಯಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಸುಮಾರು 3000ಕ್ಕೂ ಹೆಚ್ಚು ಪೊಲೀಸ್‌ ಅಧಿಕಾರಿ–ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ಉಡುಪಿ ಎಸ್ ಪಿ, ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.


10 ಮಂದಿ ಪೊಲೀಸ್‌ ಆಯುಕ್ತರು ಸೇರಿದಂತೆ ಎಂಟಕ್ಕೂ ಹೆಚ್ಚು ಜಿಲ್ಲೆಗಳಿಂದ ಪೊಲೀಸ್‌ ಸಿಬ್ಬಂದಿಗಳನ್ನು ಕರೆಸಿಕೊಳ್ಳಲಾಗಿದೆ.


ಭದ್ರತಾ ವ್ಯವಸ್ಥೆಗೆ ಎಸ್‌ಪಿಜಿ ತಂಡ ನೇತೃತ್ವ ವಹಿಸಿದ್ದು, ತಂಡ ಈಗಾಗಲೇ ಉಡುಪಿಗೆ ಆಗಮಿಸಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದೆ. ಸ್ಥಳೀಯ ಪೊಲೀಸ್‌ ಸಿಬ್ಬಂದಿಯೂ ಅವರೊಂದಿಗೆ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಒಟ್ಟು ಬಂದೋಬಸ್ತ್‌ ವ್ಯವಸ್ಥೆಯನ್ನು ಎಡಿಜಿಪಿ ಜಿತೇಂದ್ರ ಕುಮಾರ್‌ ಅವರ ಮೇಲ್ವಿಚಾರಣೆಯಲ್ಲಿ, ಐಜಿ ಸಂದೀಪ್‌ ಪಟೀಲ್‌ ಮತ್ತು ಐಜಿ ಚಂದ್ರಗುಪ್ತ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!