Saturday, September 26, 2026
Homeಕ್ರೈಮ್ಸಕಲೇಶಪುರ: ಕಾಫಿ, ಮೆಣಸು ಬೆಳೆ ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಸಕಲೇಶಪುರ: ಕಾಫಿ, ಮೆಣಸು ಬೆಳೆ ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ

Telegram Group
Join Now

ಸಕಲೇಶಪುರ: ಕಾಫಿ, ಮೆಣಸು ಬೆಳೆಗೆ ಪರಿಹಾರ ಹಾಗೂ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು.

ಬಿಜೆಪಿ ರೈತ ಮೋರ್ಚಾ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಶಾಸಕ ಸಿಮೆಂಟ್ ಮಂಜು ಸೇರಿದಂತೆ ನೂರಾರು ಮಂದಿ ಭಾಗಿಯಾಗಿದ್ದರು.

ಬೆಳೆ ಪರಿಹಾರ ನೀಡದೇ ರೈತರ ಬದುಕಿನ ಜೊತೆ ಸರ್ಕಾರ ಚೆಲ್ಲಾಟ ನಡೆಸ್ತಿದೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ರು. ರೈತರ ಹಿತ ಕಾಯಬೇಕಾದ ಸರ್ಕಾರ, ಕುರ್ಚಿಗಾಗಿ ಕಿತ್ತಾಟ ನಡೆಸ್ತಾ ಇರೋದು ನಿಜಕ್ಕೂ ದುರಂತ, ನಾಚಿಕೆಯಾಗಬೇಕು ಅಂತಾ ಶಾಸಕ ಸಿಮೆಂಟ್ ಮಂಜು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೂಡಲೇ ಸಂಕಷ್ಟದಲ್ಲಿರೋ ರೈತರ ನೆರವಿಗೆ ಸರ್ಕಾರ ಬರಬೇಕು ಅಂತಾ ಶಾಸಕ ಸಿಮೆಂಟ್ ಮಂಜು ಆಗ್ರಹಿಸಿದ್ರು. ಪಟ್ಟಣದ ಹಳೆ ಬಸ್ ನಿಲ್ದಾಣದಿಂದ ಎಸಿ ಕಚೇರಿವರೆಗೂ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಯ್ತು.!

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!