Sunday, August 16, 2026
Homeಜಿಲ್ಲಾಸುದ್ದಿಹಾಸನ: ಡಿ. 6ರಂದು ಸಿಎಂ ಹಾಸನ ಜಿಲ್ಲೆಗೆ ಆಗಮನ: ಸ್ಥಳ ಪರಿಶೀಲನೆ ನಡೆಸಿದ ಉಸ್ತುವಾರಿ ಸಚಿವ...

ಹಾಸನ: ಡಿ. 6ರಂದು ಸಿಎಂ ಹಾಸನ ಜಿಲ್ಲೆಗೆ ಆಗಮನ: ಸ್ಥಳ ಪರಿಶೀಲನೆ ನಡೆಸಿದ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ

Telegram Group
Join Now

ಹಾಸನ: ಡಿಸೆಂಬರ್‌ 06 ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಅಲ್ಲದೆ, ಜಿಲ್ಲೆಯಲ್ಲಿ ನೂತನವಾಗಿ ಗುರುತಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಿದ್ದು. ಹೀಗಾಗಿ ಇಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಖುದ್ದಾಗಿ ಸಿಎಂ ಕಾರ್ಯಕ್ರಮ ನಡೆಯಲಿರುವ ಹಾಸನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಆವರಣಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿ ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ಇನ್ನಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು

ಮೊದಲಿಗೆ ನಗರದ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಬೃಹತ್ ಕಾರ್ಯಕ್ರಮಕ್ಕೆ ವೇದಿಕೆ ಮತ್ತು ಇನ್ನಿತರೆ ವಿಚಾರಗಳ ಬಗ್ಗೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು ಆ ನಂತರ ಜಿಲ್ಲಾ ಪಂಚಾಯಿತಿ ವೈಸಳ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಯಾವುದೇ ರೀತಿ ಕಾರ್ಯಕ್ರಮಕ್ಕೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments