ಚಿಕ್ಕಮಗಳೂರು: ದತ್ತ ಜಯಂತಿ ಕಾರ್ಯಕ್ರಮವು ಡಿಸೆಂಬರ್ 2 ರಿಂದ 4 ರವರೆಗೆ ನಡೆಯಲಿರುವುದರಿಂದ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸುವ ಸಲುವಾಗಿ ಡಿಸೆಂಬರ್ 3ರ ಬುಧವಾರ ನಡೆಯಬೇಕಿದ್ದ ವಾರದ ಸಂತೆಯನ್ನು ಮುಂದೂಡಲಾಗಿದ್ದು, ಡಿಸೆಂಬರ್ 5ರ ಶುಕ್ರವಾರಕ್ಕೆ ನಿಗದಿಪಡಿಸಲಾಗಿದೆ. ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.
ಡಿಸೆಂಬರ್ 4 ರಂದು ಬೆಳಿಗ್ಗೆ 4 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸುವ ಸಲುವಾಗಿ ಚಿಕ್ಕಮಗಳೂರು ನಗರದ ರತ್ನಗಿರಿ ರಸ್ತೆ, (ಆರ್.ಜಿ.ರಸ್ತೆ) ಮತ್ತು ಇಂದಿರಾ ಗಾಂಧಿ ರಸ್ತೆ (ಐ.ಜಿ. ರಸ್ತೆ), ಮೂಗ್ತಿಹಳ್ಳಿಯಿಂದ ಚಿಕ್ಕಮಗಳೂರು ನಗರದ ಕೆ.ಎಸ್.ಆರ್.ಟಿ.ಸಿ. ನಿಲ್ದಾಣದವರೆಗೆ (ಕೆ.ಎಂ ರಸ್ತೆ), ಐ.ಜಿ.ರಸ್ತೆ, ಆರ್.ಜಿ.ರಸ್ತೆ (ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ರಾಮನಹಳ್ಳಿವರೆಗೆ), ಕೆ.ಎಂ.ರಸ್ತೆ (ಶೃಂಗಾರ್ ಸರ್ಕಲ್ನಿಂದ ಎ.ಐ.ಟಿ ಸರ್ಕಲ್ವರೆಗೆ) ಹಾಗೂ ಬಸವನಹಳ್ಳಿ ಮುಖ್ಯ ರಸ್ತೆ (ಕೆ.ಇ.ಬಿ ಈದ್ಗಾ ಬಳಿಯಿಂದ ಹನುಮಂತಪ್ಪ ವೃತ್ತದವರೆಗೆ)ಗಳಲ್ಲಿರುವ ಎಲ್ಲಾ ರೀತಿಯ ಅಂಗಡಿ ಮುಂಗಟ್ಟುಗಳನ್ನು ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಮುಚ್ಚಲು ಸೂಚಿಸಲಾಗಿದೆ ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
