ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಸಖರಾಯಪಟ್ಟಣದಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಹೌದು .. ಸಖರಾಯಪಟ್ಟಣದಲ್ಲಿ ರಾತ್ರಿ ಹನ್ನೊಂದು ಗಂಟೆ ಸಮಯದಲ್ಲಿ ಗಣೇಶ್(35) ವರ್ಷದ ವ್ಯಕ್ತಿಯನ್ನು ಪಕ್ಷ ಒಂದರ ಸಂಘಟನೆಗೆ ಸೇರಿದವರು ಕೊಚ್ಚಿ ಕೊಲೆ ಮಾಡಿದ್ದಾರೆ
ಹೀಗಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಜಿಲ್ಲಾ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಈತನ ಹಿನ್ನೆಲೆ ಕೂಡ ಚನ್ನಾಗಿ ಇಲ್ಲ. ಕಿಡ್ನಾಪ್ ದೂರಿನಲ್ಲಿ ಜೈಲಿನಲ್ಲಿ ಇದ್ದು ಬಂದವನು ಎನ್ನುತ್ತಾರೆ. ಇತ್ತೀಚಿನ ದಿನಗಳಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡುಗಿದ್ದ ಈತಾ ಕಲರ್ ಪುಲ್ ವರ್ತನೆ ನಡವಳಿಕೆ ಕೊಲೆಗೆ ಕಾರಣವೋ ? ರಾಜಕೀಯ ಕಾರಣವೋ ? ಎಂಬುದು ಹೊರ ಬರಬೇಕಾಗಿದೆ.
