Monday, August 10, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಬಳಿ 25ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಪ್ರತ್ಯಕ್ಷ: ಸ್ಥಳೀಯರಲ್ಲಿ...

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಬಳಿ 25ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ!

Telegram Group
Join Now

ಚಿಕ್ಕಮಗಳೂರು: ಕಾಫಿನಾಡಿನ ಮುತ್ತೋಡಿ ಬಳಿ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಅಂಚಿನಲ್ಲಿ 25ಕ್ಕೂ ಹೆಚ್ಚು ಕಾಡಾನೆಗಳ ದಂಡು ಮತ್ತೆ ಪ್ರತ್ಯಕ್ಷವಾಗಿದೆ. ರಸ್ತೆ ದಾಟುತ್ತಿದ್ದ ಗಜಪಡೆಯನ್ನು ನೋಡಿ ಅಲ್ಲಿನ ವಾಹನ ಸವಾರರು ವಾಹನಗಳನ್ನು ನಿಲ್ಲಿಸಿ ಅವುಗಳಿಗೆ ದಾರಿ ಮಾಡಿಕೊಟ್ಟಿದ್ದಾರೆ.

ಇತ್ತೀಚೆಗೆ ಕಾಡಾನೆಗಳ ಸಂಚಾರ ಹೆಚ್ಚಾಗಿದ್ದು ಮುತ್ತೋಡಿ ಬಳಿ ಜನವಸತಿ ಪ್ರದೇಶ ಹಾಗೂ ರಸ್ತೆಗಳಲ್ಲಿ 25ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಓಡಾಡುತ್ತಿರುವುದು ಸ್ಥಳೀಯರಲ್ಲಿ ಭೀತಿಯನ್ನು ಉಂಟುಮಾಡಿದೆ.

ಹಾಗೆ ಶೃಂಗೇರಿ ತಾಲೂಕಿನ ಕೆರೆಕಟ್ಟೆ, ಶೀರ್ಲು, ಕೆರೆಗದ್ದೆ, ಅಣಲಕ್ಕಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಾಡಾನೆಗಳ ದಾಳಿಯಿಂದ ಜನಜೀವನ ಸಂಕಷ್ಟಕ್ಕೀಡಾಗಿದೆ. ಭತ್ತ, ಅಡಿಕೆ ಸೇರಿದಂತೆ ಪ್ರಮುಖ ಬೆಳೆಗಳನ್ನು ಕಾಡಾನೆಗಳ ಹಿಂಡು ನಿರಂತರವಾಗಿ ನಾಶ ಪಡಿಸುತ್ತಿದ್ದು, ರೈತರು ಸಂಕಟಕ್ಕೀಡಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments