Friday, March 27, 2026
Homeಸ್ಪೋರ್ಟ್ಸ್ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಪಂದ್ಯಗಳಿಗೆ ಶೀಘ್ರವೇ ಗ್ರೀನ್ ಸಿಗ್ನಲ್!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಪಂದ್ಯಗಳಿಗೆ ಶೀಘ್ರವೇ ಗ್ರೀನ್ ಸಿಗ್ನಲ್!

ಬೆಂಗಳೂರು ಐಪಿಎಲ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತಮ್ಮ ತವರು ನೆಲವಾದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ಅವಕಾಶ ಪಡೆಯುವ ಸಾಧ್ಯತೆ ಹೆಚ್ಚಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ನೂತನ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರು, ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಈ ಭೇಟಿಯ ನಂತರ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ನಾಳೆ ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಕ್ರಿಕೆಟ್ ನಿಲ್ಲಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದಿರುವ ಅವರು, ಜನಸಂದಣಿ ನಿಯಂತ್ರಣಕ್ಕಾಗಿ ನ್ಯಾಯಮೂರ್ತಿ ಮೈಕಲ್‌ ಕುನ್ಹಾ ಆಯೋಗ ಶಿಫಾರಸು ಮಾಡಿದ ನಿಯಮಗಳನ್ನು ಪಾಲಿಸಬೇಕೆಂದು ತಿಳಿಸಿದ್ದಾರೆ. ಕೆಎಸ್‌ಸಿಎ ಅಧ್ಯಕ್ಷರು ಈ ಸಲಹೆಗಳನ್ನು ಒಪ್ಪಿಕೊಂಡಿರುವುದರಿಂದ, ರಾಜ್ಯದ ಗೌರವಕ್ಕೆ ಧಕ್ಕೆಯಾಗದಂತೆ ಎಲ್ಲಾ ಕ್ರಿಕೆಟ್ ಅಭಿಮಾನಿಗಳಿಗೆ ಸ್ಪಂದಿಸಲು ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ಈ ಸಕಾರಾತ್ಮಕ ಪ್ರತಿಕ್ರಿಯೆಯಿಂದಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳು ನಡೆಯುವುದು ಬಹುತೇಕ ಖಚಿತವಾಗಿದೆ.

ಸ್ಟೇಡಿಯಂಗೆ ನಿಷೇಧವೇಕೆ?

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳ ಆಯೋಜನೆಗೆ ತಡೆ ಉಂಟಾಗಲು ಮುಖ್ಯ ಕಾರಣವೆಂದರೆ, ಜೂನ್ 4 ರಂದು RCB ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದರು. ಈ ದುರಂತವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರವು ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ತನಿಖೆಯ ವೇಳೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯಲ್ಲಿ ಲೋಪದೋಷಗಳು ಬಹಿರಂಗಗೊಂಡಿದ್ದವು. ಇದರ ಹಿನ್ನೆಲೆಯಲ್ಲಿ ಬಿಸಿಸಿಐ ಕೂಡ ಬೆಂಗಳೂರಿನಲ್ಲಿ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿರಲಿಲ್ಲ. ಪ್ರಸ್ತುತ, ನ್ಯಾಯಮೂರ್ತಿ ಮೈಕಲ್‌ ಕುನ್ಹಾ ನೇತೃತ್ವದ ಆಯೋಗವು ಸಲ್ಲಿಸಿರುವ ಲೋಪದೋಷಗಳ ಕುರಿತ ವರದಿಯ ಸಲಹೆಗಳನ್ನು ಪಾಲಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ (KSCA) ಒಪ್ಪಿಕೊಂಡಿದೆ. ಹೀಗಾಗಿ ಪಂದ್ಯಗಳ ಆಯೋಜನೆಗೆ ಶೀಘ್ರದಲ್ಲೇ ಗ್ರೀನ್ ಸಿಗ್ನಲ್ ಸಿಗುವ ನಿರೀಕ್ಷೆಯಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!