Friday, June 26, 2026
Homeಕ್ರೈಮ್ಶೃಂಗೇರಿ: ರೈತರಿಗೆ ಸೂಕ್ತ ಬೆಳೆ ವಿಮೆ ಪರಿಹಾರವನ್ನು ಬಿಡುಗಡೆ ಮಾಡುವಂತೆ ಪ್ರತಿಭಟನೆ, ಮನವಿ

ಶೃಂಗೇರಿ: ರೈತರಿಗೆ ಸೂಕ್ತ ಬೆಳೆ ವಿಮೆ ಪರಿಹಾರವನ್ನು ಬಿಡುಗಡೆ ಮಾಡುವಂತೆ ಪ್ರತಿಭಟನೆ, ಮನವಿ

ಶೃಂಗೇರಿ: ರೈತರಿಗೆ ಸೂಕ್ತ ಬೆಳೆ ವಿಮೆ ಪರಿಹಾರವನ್ನು ಬಿಡುಗಡೆ ಮಾಡುವಂತೆ ತಾಲೂಕು ಕಚೇರಿ ಮುಂಭಾಗ ಬಿಜೆಪಿ ಶೃಂಗೇರಿ ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ತಾಲೂಕಿನ ರೈತರಿಗೆ ಬೆಳೆ ವಿಮೆ ಪರಿಹಾರ ಸರಿಯಾಗಿ ತಲುಪದೇ ಇರುವ ಗಂಭೀರ ಸಮಸ್ಯೆಯಾಗಿದೆ. ರೈತರು ಸಂಕಷ್ಟದಲ್ಲಿದ್ದು ಕೃಷಿಕರ ನೋವಿಗೆ ತಕ್ಷಣ ಸ್ಪಂದಿಸಿ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕ್ಷೇತ್ರದ ಮಾಜಿ ಶಾಸಕ ಡಿ.ಎನ್‌.ಜೀವರಾಜ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹೇಳಿದರು. ಪ್ರತಿಭಟನೆಯ ಬಳಿಕ ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಲಾಯಿತು.

ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಉಮೇಶ್ ತಲಗಾರು, ಶೃಂಗೇರಿ ಶಿವಣ್ಣ, ನೂತನ್ ಕುಮಾರ್, ವೇಣುಗೋಪಾಲ್ , ರಮೇಶ್, ತಿಪ್ಪನಮಕ್ಕಿ ವಿಜಯ್, ನಂದೀಶ್ ಕುಂಚೆಬೈಲು, ಅಂಗುರ್ಡಿ ದಿನೇಶ್, ಸುನೀಲ್ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments