Wednesday, March 25, 2026
Homeಕ್ರೈಮ್ಅಪ್ರಾಪ್ತ ಬಾಲಕಿ ಅತ್ಯಾಚಾರ ಕೇಸ್‌ನಲ್ಲಿ ತಲೆಮರೆಸಿಕೊಂಡಿದ್ದ ಮ್ಯೂಸಿಕ್ ಮೈಲಾರಿ ಪೊಲೀಸರ ಬಲೆಗೆ

ಅಪ್ರಾಪ್ತ ಬಾಲಕಿ ಅತ್ಯಾಚಾರ ಕೇಸ್‌ನಲ್ಲಿ ತಲೆಮರೆಸಿಕೊಂಡಿದ್ದ ಮ್ಯೂಸಿಕ್ ಮೈಲಾರಿ ಪೊಲೀಸರ ಬಲೆಗೆ

ಬಾಗಲಕೋಟೆ:ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದ ಉತ್ತರ ಕರ್ನಾಟಕದ ಖ್ಯಾತ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ನಂತರ ತಲೆಮರೆಸಿಕೊಂಡು ಮಹಾರಾಷ್ಟ್ರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಮೈಲಾರಿಯನ್ನು ಮಹಾರಾಷ್ಟ್ರದ ಜತ್ತ ವ್ಯಾಪ್ತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿವರ
ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಆಯೋಜಿಸಿದ್ದ ಹನುಮಂತ ದೇವರ ಓಕುಳಿ ಕಾರ್ಯಕ್ರಮದ ಆರ್ಕೆಸ್ಟ್ರಾದಲ್ಲಿ ಹಾಡಲು ಮೈಲಾರಿ ಬಂದಿದ್ದ. ಇದೇ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಅಪ್ರಾಪ್ತ ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ. ಅಷ್ಟೇ ಅಲ್ಲದೆ, ಈ ಕೃತ್ಯದ ವಿಡಿಯೋ ಕೂಡ ಮಾಡಿಕೊಳ್ಳಲಾಗಿದೆ ಎಂದು ಸಂತ್ರಸ್ರೆ ದೂರಿನಲ್ಲಿ ತಿಳಿಸಿದ್ದಾಳೆ.

ಈ ಸಂಬಂಧ ಡಿಸೆಂಬರ್ 14 ರಂದು ಚಿಕ್ಕೋಡಿ ಠಾಣೆಯಲ್ಲಿ ಮೈಲಾರಿ ಸೇರಿದಂತೆ 7 ಜನರ ವಿರುದ್ಧ ಪೋಕ್ಸೋ (POCSO) ಮತ್ತು ಹಲ್ಲೆ ಪ್ರಕರಣ ದಾಖಲಾಗಿತ್ತು. ಘಟನೆ ಮಹಾಲಿಂಗಪುರ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ಡಿಸೆಂಬರ್ 15 ರಂದು ಪ್ರಕರಣವನ್ನು ಮಹಾಲಿಂಗಪುರ ಠಾಣೆಗೆ ವರ್ಗಾಯಿಸಲಾಗಿತ್ತು. ನಂತರ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡಗಳನ್ನು ರಚಿಸಿ ತನಿಖೆ ಕೈಗೊಂಡ ಪೊಲೀಸರು, ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಪ್ರಮುಖ ಆರೋಪಿ ಮೈಲಾರಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಮೈಲಾರಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿರುವ ಉಳಿದ ಆರು ಮಂದಿ ಆರೋಪಿಗಳ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿದಿದೆ. ಪೊಲೀಸರು ಈಗಾಗಲೇ ಸ್ಥಳ ಮಹಜರು ಮತ್ತು ಕಾಲ್ ಡಿಟೇಲ್ಸ್ ಸಂಗ್ರಹದಂತಹ ತಾಂತ್ರಿಕ ಸಾಕ್ಷ್ಯಗಳನ್ನು ಕಲೆಹಾಕುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!