Wednesday, August 12, 2026
Homeಕ್ರೈಮ್ಚಿಕ್ಕಮಗಳೂರು: ಬಿಜೆಪಿ ಕಚೇರಿಗೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮುತ್ತಿಗೆ ಯತ್ನ: ಪೊಲೀಸರ ಜೊತೆ ತಳ್ಳಾಟ!

ಚಿಕ್ಕಮಗಳೂರು: ಬಿಜೆಪಿ ಕಚೇರಿಗೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮುತ್ತಿಗೆ ಯತ್ನ: ಪೊಲೀಸರ ಜೊತೆ ತಳ್ಳಾಟ!

Telegram Group
Join Now

ಚಿಕ್ಕಮಗಳೂರು: ನ್ಯಾಷನಲ್ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಚಾರ್ಜ್‌ ಶೀಟ್‌ ಅನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಹಾಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ರಾಜಕೀಯ ಪಿತೂರಿ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಮುತ್ತಿಗೆ ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬಿಜೆಪಿ ಕಚೇರಿಗೆ ಸಂಪರ್ಕಿಸುವ ಎರಡು ರಸ್ತೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ಬಿಗಿ ಭದ್ರತೆ ಒದಗಿಸಿದರು‌

ನಗರದ ಸೇಂಟ್ ಜೋಸೆಫ್ ಚರ್ಚ್ ಬಳಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದಾಗ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆಯಿತು ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು‌ ತಳ್ಳಿ ಬಿಜೆಪಿ ಕಚೇರಿಗೆ ನುಗ್ಗಲು ಪ್ರಯತ್ನಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments