Tuesday, February 10, 2026
Homeಕ್ರೈಮ್ಚಿಕ್ಕಮಗಳೂರು: ಮುಳ್ಳಯ್ಯನಗಿರಿಯಲ್ಲಿ ಜೀಪ್ ಪಲ್ಟಿ, ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: ಮುಳ್ಳಯ್ಯನಗಿರಿಯಲ್ಲಿ ಜೀಪ್ ಪಲ್ಟಿ, ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳಿದ್ದ ಜೀಪ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ  ವಿದ್ಯಾರ್ಥಿಗಳಿಗೆ ಗಾಯ ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯಗಿರಿಯಲ್ಲಿ ನಡೆದಿದೆ.

ಹೌದು .. ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿ ಮಾರ್ಗದಲ್ಲಿ ಪ್ರವಾಸಕ್ಕೆ ತೆರಳಿದ್ದ ಜೀಪ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಆರು ವಿದ್ಯಾರ್ಥಿಗಳಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗೆ ಅಪಘಾತವಾಗುತ್ತಿದ್ದಂತೆ ಜೀಪ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಕೇರಳದಿಂದ ಬಸ್ ನಲ್ಲಿ ಬಂದಿದ್ದ ವಿದ್ಯಾರ್ಥಿಗಳು ಮುಳ್ಳಯ್ಯನಗಿರಿಗೆ ಬಸ್ ಹೋಗಲ್ಲ ಅಂತಾ ಜೀಪ್ ನಲ್ಲಿ ಪಯಣ ಮಾಡಿದ್ದು ಚಾಲಕನ ಅತಿ ವೇಗದಿಂದ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾಗಿದೆ ಎಂದು ವಿದ್ಯಾರ್ಥಿಗಳು ಕಿಡಿ ಕಾರಿದ್ದಾರೆ.

ಪ್ರಕರಣ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!