Tuesday, February 10, 2026
Homeಕ್ರೈಮ್ಚಿಕ್ಕಮಗಳೂರು: ಬಾಂಗ್ಲಾದೇಶದಲ್ಲಿನ ಹಿಂದೂಗಳ ಹತ್ಯೆ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರು: ಬಾಂಗ್ಲಾದೇಶದಲ್ಲಿನ ಹಿಂದೂಗಳ ಹತ್ಯೆ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರು: ಬಾಂಗ್ಲಾದೇಶದಲ್ಲಿ ಹಿಂದೂ ಯುವಕ ದೀಪು ಚಂದ್ರದಾಸ್ ಹತ್ಯೆ ಖಂಡಿಸಿ  ಕಾಫಿನಾಡು ಚಿಕ್ಕಮಗಳೂರಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂಪರ ಸಂಘಟನೆಗಳಿಂದ ಬಾಂಗ್ಲಾದೇಶದ ಪ್ರದಾನಿ ಪ್ರತಿಕೃತಿ ದಹಿಸಿ ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ನಡೆಸಲಾಯಿತು.

ಈ ವೇಳೆ ಬಾಂಗ್ಲಾ ದೇಶದ ಕೃತ್ಯವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ನಮ್ಮಲ್ಲಿರೋ ಅಕ್ರಮ ಬಾಂಗ್ಲಾ ವಲಸಿಗರನ್ನ ಒದ್ದು ಹೊರಹಾಕಬೇಕು ಎಂದು ಪೊಲೀಸ್ ಇಲಾಖೆಗೆ ಹಿಂದೂಪರ ಸಂಘಟನೆಗಳು ಆಗ್ರಹ ಪಡಿಸಿದರು.

ಹಾಗೆ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಇಲ್ಲದಿದ್ದಲ್ಲಿ ಬಜರಂಗಳದಳವೇ ನೇರ ಕಾರ್ಯಾಚರಣೆ ನಡೆಸುತ್ತದೆ ಎಂದು ಗೃಹ ಇಲಾಖೆಗೆ ಎಚ್ಚರಿಕೆಯ ಸಂದೇಶ ಕೊಟ್ಟ ಬಜರಂಗದಳ ಮತ್ತು ವಿಹಿಂಪ ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!