Sunday, August 16, 2026
Homeಕ್ರೈಮ್ಶಿವಮೊಗ್ಗ: ಅಡಿಕೆ ಗೊನೆ ತೆಗೆಯುವಾಗ ವಿದ್ಯುತ್ ತಂತಿ ಸ್ಪರ್ಶ: ವ್ಯಕ್ತಿ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ!

ಶಿವಮೊಗ್ಗ: ಅಡಿಕೆ ಗೊನೆ ತೆಗೆಯುವಾಗ ವಿದ್ಯುತ್ ತಂತಿ ಸ್ಪರ್ಶ: ವ್ಯಕ್ತಿ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ!

Telegram Group
Join Now

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಅಡಿಕೆ ತೋಟದಲ್ಲಿ ಕೊನೆ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೊಸನಗರ ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡೋಳ್ಳಿ ಗ್ರಾಮದ ಪುಟ್ಟಸ್ವಾಮಿ (52) ಎಂಬುವವರು ಪರಿಚಯಸ್ಥರ ತೋಟದಲ್ಲಿ ಅಡಿಕೆ ಕೊನೆ ಕೊಯ್ಯುವಾಗ ಆಕಸ್ಮಿಕವಾಗಿ ದೂಟಿ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ಒಮ್ಮೆಲೆ ವಿದ್ಯುತ್ ಹರಿದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಇವರ ಜೊತೆಗೆ ಕೆಲಸ ಮಾಡುತ್ತಿದ್ದ ರವಿಶೆಟ್ಟಿ (35) ಎಂಬುವವರು ಪುಟ್ಟಸ್ವಾಮಿಯವರನ್ನು ರಕ್ಷಿಸಲು ಹೋಗಿದ್ದಾರೆ. ಆಗ ಅವರಿಗೂ ವಿದ್ಯುತ್‌ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments