Tuesday, March 31, 2026
Homeಕ್ರೈಮ್ಚಿಕ್ಕಮಗಳೂರು: ಹುಡುಗಿಗೆ ಮೆಸೇಜ್ ಮಾಡಿ ಟಾರ್ಚರ್‌: ಯುವಕನ ಬರ್ಬರ ಹತ್ಯೆ

ಚಿಕ್ಕಮಗಳೂರು: ಹುಡುಗಿಗೆ ಮೆಸೇಜ್ ಮಾಡಿ ಟಾರ್ಚರ್‌: ಯುವಕನ ಬರ್ಬರ ಹತ್ಯೆ

ಚಿಕ್ಕಮಗಳೂರು: ಹುಡುಗಿಗೆ ಮೆಸೇಜ್ ಮಾಡಿ ಟಾರ್ಚರ್‌ ಮಾಡುತ್ತಿದ್ದ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ನಡೆದಿದೆ.

ಹೌದು .. ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ಮಂಜುನಾಥ್ (21) ಕೊಲೆಯಾದ ಯುವಕನಾಗಿರುತ್ತಾನೆ. ಬೇರೊಬ್ಬರ ಜೊತೆ ಎಂಗೇಜ್ಮೆಂಟ್ ಆಗಿದ್ದ ಯುವತಿಗೆ ನಿರಂತರ ಮೆಸೇಜ್ ಮಾಡ್ತಿದ್ದ ಇದರಿಂದ ಸಿಟ್ಟಿಗೆದ್ದ ಯುವತಿ ಸಂಬಂಧಿಕರೇ ಚಾಕು ಇರಿದಿದ್ದಾರೆ. ಗಂಭೀರ ಗಾಯಗೊಂಡಿದ್ದ ಮಂಜುನಾಥ್ ಶಿವಮೊಗ್ಗದ ಆಸ್ಪತೆಯಲ್ಲಿ ಸಾವನ್ನಪ್ಪಿದ್ದಾನೆ.

ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೇ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಯುವತಿಗೆ ಈಗಾಗಲೇ ವೇಣು ಎಂಬ ಯುವಕನೊಂದಿಗೆ ಮದುವೆ ನಿಶ್ಚಿತಾರ್ಥವಾಗಿದ್ದು, ‘ಎಂಗೇಜ್ಮೆಂಟ್ ಆಗಿದೆ, ಮೆಸೇಜ್ ಮಾಡಬೇಡ’ ಎಂದು ಯುವತಿ ಮಂಜುನಾಥ್‌ಗೆ ತಿಳಿಸಿದ್ದಳು. ಆದರೂ ಮಂಜುನಾಥ್ ಮೆಸೇಜ್ ಮಾಡುತ್ತಲೇ ಇದ್ದ. ಇದನ್ನು ಯುವತಿ ತನ್ನನ್ನು ಮದುವೆಯಾಗಲಿರುವ ಯುವಕ ವೇಣುಗೆ ತಿಳಿಸಿದ್ದಾಳೆ.

 ಮಾತನಾಡಬೇಕು ಎಂದು ಮಂಜುನಾಥ್‌ನನ್ನು ಕರೆಸಿಕೊಂಡ ವೇಣು ಆತನ ಮೇಲೆ ಸ್ನೇಹಿತರಾದ ಕಿರಣ್, ಅಪ್ಪು ಮತ್ತು ಮಂಜು ಜೊತೆ ಜಗಳವಾಡಿದ್ದಾನೆ. ಗಲಾಟೆ ವೇಳೆ ಮಂಜುನಾಥ್‌ಗೆ ಚಾಕುವಿನಿಂದ ಇರಿದು ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. 

ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!