Friday, March 27, 2026
Homeಕ್ರೈಮ್ಕೊಟ್ಟಿಗೆಹಾರ: ರಾಣಿ ಝರಿ ವಿವ್‌ ಪಾಯಿಂಟ್‌ʼಗೆ ಟಿಕೆಟ್:‌ ಗ್ರಾಮಸ್ಥರಿಂದ ತೀವ್ರ ವಿರೋಧ!

ಕೊಟ್ಟಿಗೆಹಾರ: ರಾಣಿ ಝರಿ ವಿವ್‌ ಪಾಯಿಂಟ್‌ʼಗೆ ಟಿಕೆಟ್:‌ ಗ್ರಾಮಸ್ಥರಿಂದ ತೀವ್ರ ವಿರೋಧ!

ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನಪ್ರಿಯ ಪ್ರವಾಸಿ ತಾಣವಾದ ರಾಣಿ ಝರಿ ವಿವ್ ಪಾಯಿಂಟ್ ಗೆ ಅರಣ್ಯ ಇಲಾಖೆ ಟಿಕೆಟ್ ವ್ಯವಸ್ಥೆ ಜಾರಿಗೆ ತಂದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ ಈ ನಿರ್ಧಾರ ವಿರೋಧಿಸಿ ಸ್ಥಳೀಯ ಗ್ರಾಮಸ್ಥರು ರಾಣಿ ಜರಿ ಬಳಿ ಬಾರಿ ಪ್ರತಿಭಟನೆ‌ ನಡೆಸಿದರು.

ಪ್ರತಿಭಟನೆಯ ಮಾಹಿತಿ ತಿಳಿದು ಉಪವಲಯ ಅರಣ್ಯಾಧಿಕಾರಿ ನಿಶ್ಚಿತ್ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು. ಮೇಲಾಧಿಕಾರಿಗಳ ನಿರ್ದೇಶನದಂತೆ ಟಿಕೆಟ್ ವ್ಯವಸ್ಥೆ ಜಾರಿಗೆ ತರಲಾಗಿದೆ ಇದರ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಮಾಡುವುದಾಗಿ ಭರವಸೆ ನೀಡಿದರು.

ಪ್ರತಿದಿನ ನೂರಾರು ಪ್ರವಾಸಿಗರು ಭೇಟಿ ನೀಡುವ ಈ ಪ್ರದೇಶಗಳಲ್ಲಿ ಈಗಾಗಲೇ ಬಂಡಾಜೆ ಫಾಲ್ಸ್ ಗೆ ತಲಾ 300 ರೂ. ಶುಲ್ಕ ವಿಧಿಸಲಾಗುತ್ತದೆ ಇದರ ನಡುವೆ ರಾಣಿ ಝರಿ ವಿವ್ ಪಾಯಿಂಟ್‌ ಗೂ ಶುಲ್ಕ ನಿಗದಿ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿರ್ಧಾರ ಕೈಗೊಳ್ಳುವ ಮೊದಲು ಸ್ಥಳೀಯರೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಬಳಿಗೆ ಗ್ರಾಮಗಳ 300ಕ್ಕೂ ಹೆಚ್ಚು ಗ್ರಾಮಸ್ಥರು ಭಾಗವಹಿಸಿದ್ದರು. ಟಿಕೆಟ್ ವ್ಯವಸ್ಥೆಯನ್ನು ಹಿಂಪಡೆಯದಿದ್ದಲ್ಲಿ ಹೋರಾಟವನ್ನು ಮತ್ತಷ್ಟು ತೀರ್ವಗೊಳಿಸುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!