ಚಿಕ್ಕಮಗಳೂರು. ಭೂಮಿಕಾ ಎಂಟರ್ ಟೈನರ್ ಪ್ರಸ್ತುತಿ ಅರಣ್ಯ ಸಂರಕ್ಷಣೆ ಕುರಿತು ಶಾಲಾ ಕಾಲೇಜು ಶಿಕ್ಷಕರಿಗೆ ಸಾರ್ವಜನಿಕರಿಗೆ ಹಿರಿಯ ನಾಗರಿಕರಿಗೆ ಶಿಶುವಿಹಾರ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಮನೋರಂಜನ ಕ್ರೀಡಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು 2026ರ ಲಾಂಛನ ಬಿಡುಗಡೆ ಸಮಾರಂಭವನ್ನು ಉಪ ಅರಣ್ಯ ಸಂರಕ್ಷಣಾಧಿಕಾರಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಭೂಮಿಕಾ ಎಂಟರ್ ಟೈನರ್ , ಸ್ವಸ್ಥಭೂಮಿ ಪ್ರತಿಷ್ಠಾನ, ಜೆ ಸಿ ಐ ಮಲ್ನಾಡ್ ಚಿಕ್ಕಮಗಳೂರು, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಕನ್ನಡ ಪರ ಸಂಘಟನೆ, ದಲಿತಪರ ಸಂಘಟನೆ ಇವರ ಸಂಯುಕ್ತ ಆಶ್ರಯದಲ್ಲಿ ಅರಣ್ಯ ಸಂರಕ್ಷಣೆ ಕುರಿತು ಜನವರಿ 5 ರಿಂದ 12 ರವರೆಗೆ ಶಾಲಾ ಕಾಲೇಜು ಮಕ್ಕಳಿಗೆ ನಡೆಯುತ್ತಿರುವ ವಿವಿಧ ಕಾರ್ಯಕ್ರಮದ ಲಾಂಛನ ಹಾಗೂ ಪೋಸ್ಟರ್ ಗಳನ್ನು ಚಿಕ್ಕಮಗಳೂರು ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು ಅವರು ಬಿಡುಗಡೆಗೊಳಿಸಿ ಕಾರ್ಯಕ್ರಮ ಯಶಸ್ವಿಗೊಳ್ಳಲೆಂದು ಹಾರೈಸಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರೂ ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದರೊಂದಿಗೆ ಜೀವ ವೈವಿಧ್ಯವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ವನ್ಯಜೀವಿಗಳು ಮತ್ತು ಮಾನವನ ನಡುವೆ ಉಂಟಾಗುತ್ತಿರುವ ಸಂಘರ್ಷವನ್ನು ತಡೆಯುವ ಮೂಲಕ ವನ್ಯಜೀವಿಗಳ ಸಂರಕ್ಷಣೆಗೆ ಪಣ ತೊಡಬೇಕಿದೆ, ಈ ಮೂಲಕ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭೂಮಿಕ ಎಂಟರ್ಟೈನರ್ ಸ್ವಸ್ಥಭೂಮಿ ಪ್ರತಿಷ್ಠಾನ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಮಾತನಾಡಿದರು
ಸಾಮಾಜಿಕ ಅರಣ್ಯ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಆನಂದ್ ಅವರು ಮಾತನಾಡಿ ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ, ಶ್ರೀ ಸ್ವಾಮಿ ವಿವೇಕಾನಂದ ಹಾಗೂ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ ಹಾಗೂ ಭೂಮಿಕಾ ವಾರ್ಷಿಕೋತ್ಸವದ ಅಂಗವಾಗಿ ಅರಣ್ಯ ಸಂರಕ್ಷಣೆ ಕುರಿತು ವಿವಿಧ ಕಾರ್ಯಕ್ರಮಗಳನ್ನ ಆಯೋಜಿಸಿದ್ದು ಪ್ರತಿಯೊಬ್ಬರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅರಣ್ಯ ಹಾಗೂ ನಮ್ಮ ಪ್ರಕೃತಿಯನ್ನು ಕಾಪಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಸಹಕಾರಿಯಾಗಲಿದೆ. ಎಲ್ಲರೂ ಕೈಜೋಡಿಸಿ ಈ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ಕೋರಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಕರ್ಷ್ ರವರು ಮಾತನಾಡಿ ಅಮೂಲ್ಯ ಸಸ್ಯ ಮತ್ತು ಪ್ರಾಣಿ ಸಂಪತ್ತು ಹೊಂದಿರುವ ಪಶ್ಚಿಮಘಟ್ಟ ಸಂರಕ್ಷಣೆ ಹಾಗೂ ವನ್ಯಜೀವಿಗಳ ಸಂರಕ್ಷಣೆಗಾಗಿ ನಾವು ಪಣ ತೊಡಬೇಕಿದೆ, ಇದಕ್ಕೆ ಸಾರ್ವಜನಿಕರು ನಮ್ಮೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಅಶೋಕ್ ಕೆಂಪನಹಳ್ಳಿ ಅವರು ಮಾತನಾಡಿ ನಾಡಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ ಇದರ ಜೊತೆಗೆ ಅರಣ್ಯ ಸಂರಕ್ಷಣೆ ಈ ನಾಡಿನ ಜನರ ಹೊಣೆ ಯಾಗಬೇಕು ಎಂಬ ಸಂಕಲ್ಪದೊಂದಿಗೆ ಜನವರಿ 5 ರಿಂದ 12 ವರೆಗೆ ಅರಣ್ಯ ಸಂರಕ್ಷಣೆ ಕುರಿತು ವಿವಿಧ ಕಾರ್ಯಕ್ರಮಗಳನ್ನ ಆಯೋಜಿಸಿದ್ದು ಪ್ರತಿಯೊಬ್ಬರು ತಪ್ಪದೆ ಭಾಗವಹಿಸಿ ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಸೇನೆ ಜಿಲ್ಲಾಧ್ಯಕ್ಷರಾದ ಪಿ.ಸಿ. ರಾಜೇಗೌಡ, ಮಹಿಳಾ ಘಟಕ ಜಿಲ್ಲಾಧ್ಯಕ್ಷರಾದ ಚೈತ್ರ ಗೌಡ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಮಾರ್ ಆರ್ ಶೆಟ್ಟಿ, ಗ್ರೀನ್ ಫೋರ್ಸ್ ಮುಖ್ಯಸ್ಥರಾದ ಪ್ರದೀಪ್ ಗೌಡ, ದಲಿತ ಸಂಘರ್ಷ ಸಮಿತಿ ಸಂಚಾಲಕರಾದ ಕಬ್ಬಿಗೆರೆ ಮೋಹನ್, ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ರಾಜ್ ಪ್ರಶಾಂತ್, ದಲಿತ ಜನ ಸೇನೆ ಮಹಿಳಾ ಘಟಕ ಜಿಲ್ಲಾಧ್ಯಕ್ಷರಾದ ಸ್ವರ್ಣಗೌರಿ, ಭಾರತಿ, ಭಾರತೀಯ ಕಿಸಾನ್ ಸಂಘದ ಅಧ್ಯಕ್ಷರಾದ ರಾಘವೇಂದ್ರ ಮತ್ತಾವರ, ಕನ್ನಡ ಸೇನೆಯ ಸತೀಶ್ ಸಾರಥಿ, ಜೆ ಸಿ ಐ ಪೂರ್ವ ಅಧ್ಯಕ್ಷರಾದ ಪುಷ್ಪ ವಿಜಯ್, ಜೆ ಸಿ ಐ ಅಧ್ಯಕ್ಷರಾದ ತಿಲಕ್ ದತ್ ಭೂಮಿಕಾ ಟಿವಿಯ ರಾಜಶೇಖರ್, ಮನೋಜ್ ಗಗನ್ ಸಚಿನ್ ವಿಶ್ವನಾಥ್ ಮುಂತಾದವರು ಉಪಸ್ಥಿತರಿದ್ದರು
