Tuesday, August 11, 2026
Homeಜಿಲ್ಲಾಸುದ್ದಿಕೊಪ್ಪ: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಹುಟ್ಟುಹಬ್ಬ:ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಕೊಪ್ಪ: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಹುಟ್ಟುಹಬ್ಬ:ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Telegram Group
Join Now

ಕೊಪ್ಪ: ಕೊಪ್ಪ ತಾಲೂಕಿನ ಭಂಡಿಗಡಿಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಅವರ ಜನ್ಮದಿನದ ಪ್ರಯುಕ್ತ ಭಂಡಿಗಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ನೀಡುವುದರ ಮೂಲಕ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಸಮರ್ಥ್ ಗೌಡ ಅವರು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಅವರ ಹುಟ್ಟು ಹಬ್ಬದ ಪ್ರಯುಕ್ತ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ಗೌಡ ದಂಡಿನಮಕ್ಕಿ ಅವರ ಮಾರ್ಗದರ್ಶನದಂತೆ ಭಂಡಿಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ರೋಗಿಗಳಿಗೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಣ್ಣು ಹಂಪಲು ನೀಡುವುದರ ಮೂಲಕ ಆಚರಿಸಿರುವುದು ಸಂತೋಷ ನೀಡಿದೆ. ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಗಳು ಮುಂದುವರೆಯಲಿ. ಮಂಜುನಾಥ್ ಗೌಡ ಅವರಿಗೆ ದೇವರು ಆಯುಷ್ಯ ಆರೋಗ್ಯ ಕೊಟ್ಟು ಮುಂದೆ ಇನ್ನಷ್ಟು ಉನ್ನತ ಮಟ್ಟಕ್ಕೆ ಏರುವಂತಾಗಲಿ ಎಂದು ಪ್ರಾರ್ಥಿಸಿದರು.

ಈ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸಮರ್ಥ್ ಗೌಡ ಹೆಬ್ಬರಡಿ, ಕೊಪ್ಪ ತಾಲೂಕು ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ನಿಜಾಮುದ್ದೀನ್ ಭಂಡಿಗಡಿ, ಹರಿಹರಪುರ ಹೋಬಳಿ ಕಾಂಗ್ರೆಸ್ ಅಧ್ಯಕ್ಷರಾದ ಸುನೀಲ್, ಪ್ರೇಮ್ ಕುಮಾರ್, ಸಂತೋಷ್ ಕುಮಾರ್ ಹಾಗೂ ಕಾರ್ಯಕರ್ತರು ಇದ್ದರು.

ವರದಿ: ಶಶಿ ಬೆತ್ತದಕೊಳಲು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments