ಚಿಕ್ಕಮಗಳೂರು: ಪ್ರವಾಸಿ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪ ನಡೆದಿದೆ. ಘಟನೆಯಲ್ಲಿ ತೆಲಂಗಾಣ ಮೂಲದ ಐವರು ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೊಸ ವರ್ಷದ ಸಂಭ್ರಮಾಚರಣೆಗಾಗಿ ವಿವಿಧ ರಾಜ್ಯಗಳಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಾಫಿನಾಡಿಗೆ ಲಗ್ಗೆ ಇಡುತ್ತಿದ್ದು, ಈ ಸಂದರ್ಭದಲ್ಲಿ ನಡೆದ ಈ ಅಪಘಾತ ಆತಂಕ ಮೂಡಿಸಿದೆ. ಮಲೆನಾಡಿನ ಕಡಿದಾದ ಹಾಗೂ ಅಂಕುಡೊಂಕು ರಸ್ತೆಗಳಲ್ಲಿ ವಾಹನ ಚಲಾಯಿಸುವುದು ಹೊರರಾಜ್ಯದ ಚಾಲಕರಿಗೆ ದೊಡ್ಡ ಸವಾಲಾಗಿ ಪರಿಣಮಿಸುತ್ತಿದ್ದು, ಸರಿಯಾದ ನಿಯಂತ್ರಣ ಸಿಗದೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
