Tuesday, August 11, 2026
Homeಕ್ರೈಮ್ಚಿಕ್ಕಮಗಳೂರು: ಇಂದು ಜಿಲ್ಲೆಯಾದ್ಯಂತ ಹಲವೆಡೆ ವಿದ್ಯುತ್‌ ವ್ಯತ್ಯಯ!

ಚಿಕ್ಕಮಗಳೂರು: ಇಂದು ಜಿಲ್ಲೆಯಾದ್ಯಂತ ಹಲವೆಡೆ ವಿದ್ಯುತ್‌ ವ್ಯತ್ಯಯ!

Telegram Group
Join Now

ಚಿಕ್ಕಮಗಳೂರು ನಗರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ನಡೆಯಲಿರುವುದರಿಂದ ಇಂದು ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 

ಹಾಲೇನಹಳ್ಳಿಯಿಂದ ಅಲ್ಲಂಪುರ ರಸ್ತೆಯವರೆಗೆ ಲೋಕೋಪಯೋಗಿ ಇಲಾಖೆಯ ಕೋರಿಕೆ ಮೇರೆಗೆ ಈ ಕೆಲಸ ನಡೆಯುತ್ತಿದ್ದು, ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕೆಂಪನಹಳ್ಳಿ ಮತ್ತು ತ್ರಿವಿಕ್ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್‌ ಇರುವುದಿಲ್ಲ.

ಇದರಿಂದಾಗಿ ರತ್ನಗಿರಿ ಬಡಾವಣೆ, ಚಂದ್ರನಗರ, ಕೆಂಪನಹಳ್ಳಿ, ಬಾಳೇಹಳ್ಳಿ, ಕರ್ಕಿಪೇಟೆ, ರಾಮನಹಳ್ಳಿ, ಅಲ್ಲಂಪುರ ಹಾಗೂ ಹಾಲೇನಹಳ್ಳಿಯ ಸುತ್ತಮುತ್ತಲಿನ ನಿವಾಸಿಗಳಿಗೆ ತೊಂದರೆಯಾಗಲಿದ್ದು, ಸಾರ್ವಜನಿಕರು ಮೆಸ್ಕಾಂ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್‌ರವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments