Wednesday, March 25, 2026
Homeಕ್ರೈಮ್ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದಲ್ಲಿ ಹುಲಿ ಗಣತಿ ವೇಳೆ ಪತ್ತೆಯಾದ ಹುಲಿ ಕಳೆಬರಹ

ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದಲ್ಲಿ ಹುಲಿ ಗಣತಿ ವೇಳೆ ಪತ್ತೆಯಾದ ಹುಲಿ ಕಳೆಬರಹ

ಚಿಕ್ಕಮಗಳೂರು: ಹುಲಿ ಗಣತಿ ಆರಂಭದ ದಿನವೇ ಹುಲಿಯ ಕಳೆಬರಹ ಪತ್ತೆಯಾಗಿದೆ. ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ಹುಲಿ ಗಣತಿ ಸಿಬ್ಬಂದಿಗೆ ಹುಲಿಯ ಮೃತದೇಹ ಕಾಣಿಸಿದೆ.

ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪುಲ್ಕಿತ್ ಮೀನ ಭೇಟಿ ನೀಡಿ. ಹುಲಿ ಸಂರಕ್ಷಣಾ ಪ್ರಾಧಿಕಾರದ ನಿಮಯಾನುಸಾರ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

8 ರಿಂದ 10 ವರ್ಷದ ಗಂಡು ಹುಲಿಯಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.ಹುಲಿಯ ಮುಂಗಲಿನ ಕುತ್ತಿಗೆ ಭಾಗದಲ್ಲಿ ಇನ್ನೊಂದು ಹುಲಿ ಹೊಡೆದಿರುವ ಉಗುರಿನ ಗುರುತುಗಳು ಪತ್ತೆಯಾಗಿವೆ.
ಎರಡು ಬಲಿಷ್ಟ ಹುಲಿಗಳು ಕಾದಾಟದಲ್ಲಿ ಈ ಹುಲಿ ಸತ್ತಿದೆ. ಹುಲಿಯ ಉಗುರುಗಳು ಮತ್ತು ಹಲ್ಲುಗಳು ಹಾಗೆ ಇವೆ.

ಪಶುವೈದ್ಯಾಧಿಕಾರಿ ಸಚಿನ್ ನಾಯಕ್ ಮತ್ತು ಶಿವಕುಮಾರ್ ತಂಡ ಮರಣೋತ್ತರ ಪರೀಕ್ಷೆ ನಡೆಸಿದರು.
ಸ್ಥಳದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾತ್ರೀಶ್ವರ ಸ್ವಾಮಿ ,ವಲಯ ಅರಣ್ಯಾಧಿಕಾರಿ  ಗೌರವ, ಹುಲಿ ಸಂರಕ್ಷಣ ಪ್ರಾಧಿಕಾರದ ಪ್ರತಿನಿಧಿ ವೀರೇಶ್ ಜಿ, ವೈಲ್ಡ್ ಕೇರ್ ಸಂಸ್ಥೆಯ ಅಧ್ಯಕ್ಷ ಮಧು ಮೂಗುತಿಹಳ್ಳಿ, ಒನ್ ಅರ್ಥ್ ಸಂಸ್ಥೆಯ ಮುಖಂಡ ಭರತ್ ಸಿ ವಿ ,ಇತರೆ ಸ್ಥಳೀಯ ಪ್ರತಿನಿಧಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!